ಬೆಂಗಳೂರು: ಎರಡು ಕಾರುಗಳಲ್ಲಿದ್ದ ಕಂತೆ ಕಂತೆ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದ ಪ್ರಕರಣ ಜಯನಗರದಲ್ಲಿ ನಡೆದಿದೆ. ತಂಡ 1.349 ಕೋಟಿ ರೂ. ಸೀಜ್ ಮಾಡಿದ್ದಾರೆ.
ಬೆಳಗ್ಗೆ 9 ಗಂಟೆಯಿಂದ ಫೋಲೋ, ಬೆಂಜ್ ಮತ್ತು ಫಾರ್ಚೂನರ್ ಕಾರುಗಳು ಬಂದು ನಿಂತಿದ್ದವು. ಫೋಲೋ ಕಾರಿನಿಂದ ಬೈಕ್‍ಗೆ ಹಣ ತುಂಬಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಕೂಡಲೇ ಫಾರ್ಚೂನರ್ ಕಾರಿನಲ್ಲಿ ಐವರು ಪರಾರಿಯಾಗಿದ್ದಾರೆ. ಒಂದು ಬೈಕ್ ಹಾಗೂ ಎರಡು ಕಾರುಗಳಲ್ಲಿ ಮೂರು ಬ್ಯಾಗ್‍ನಲ್ಲಿ ಹಣ ಸಿಕ್ಕಿದೆ ಎಂದು ಎಂಸಿಸಿ ನೋಡಲ್ ಆಫೀಸರ್ ಮನೀಷ್ ಮೌದ್ಗಿಲ್ ಮಾಹಿತಿ ನೀಡಿದ್ದಾರೆ.