Home Uncategorized 10 ವರ್ಷಗಳಲ್ಲಿ ರಾಜ್ಯದ ನೀರಾವರಿ ಯೋಜನೆಗಳು ಪೂರ್ಣ: ಸಿಎಂ ಬೊಮ್ಮಾಯಿ

10 ವರ್ಷಗಳಲ್ಲಿ ರಾಜ್ಯದ ನೀರಾವರಿ ಯೋಜನೆಗಳು ಪೂರ್ಣ: ಸಿಎಂ ಬೊಮ್ಮಾಯಿ

22
0
Advertisement
bengaluru

ಇನ್ನು 10 ವರ್ಷಗಳಲ್ಲಿ ರಾಜ್ಯದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು. ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಕೆಲಸ ಮಾಡುತ್ತಿದೆ. ನೀರಾವರಿ ಯೋಜನೆಗಳನ್ನು ಈಡೇರಿಸಿ ರಾಜ್ಯದ ರೈತರು, ಸಾಮಾನ್ಯ ಜನರ ಬದುಕು ಹಸನಾಗಿಸಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೊಡಕಲ್(ಯಾದಗಿರಿ): ಇನ್ನು 10 ವರ್ಷಗಳಲ್ಲಿ ರಾಜ್ಯದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು. ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಕೆಲಸ ಮಾಡುತ್ತಿದೆ. ನೀರಾವರಿ ಯೋಜನೆಗಳನ್ನು ಈಡೇರಿಸಿ ರಾಜ್ಯದ ರೈತರು, ಸಾಮಾನ್ಯ ಜನರ ಬದುಕು ಹಸನಾಗಿಸಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್​ನ ಸಮಾವೇಶದ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ನಡೆಯುತ್ತಿದ್ದು,  ಪ್ರಧಾನಿ ಜೊತೆ ರಾಜ್ಯಪಾಲ ಗೆಹ್ಲೋಟ್​, ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ್​ ಖೂಬಾ, ಸಚಿವ ಗೋವಿಂದ ಕಾರಜೋಳ, ಶಾಸಕರಾದ ರಾಜುಗೌಡ, ಎ.ಎಸ್.ಪಾಟೀಲ್ ನಡಹಳ್ಳಿ ಉಪಸ್ಥಿತರಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಬರುತ್ತಿದೆ. 4.5 ಲಕ್ಷ ಹೆಕ್ಟರ್ ವಿಸ್ತೀರ್ಣದಲ್ಲಿ ಕೊನೆಯ ಹಂತದಲ್ಲಿ ನೀರು ತಲುಪುತ್ತಲೇ ಇರಲಿಲ್ಲ. ಇಂದು ಎಲ್ಲ ಶಾಖಾ ನಾಲೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತದೆ. ಈ ಯೋಜನೆಯು ಹೀಗಾಗಿ ಬಹಳ ಮುಖ್ಯವಾಗುತ್ತದೆ. ನಮ್ಮ ನಾಲೆಗಳಲ್ಲಿ ಶೇಕಡಾ 20ರಷ್ಟು ಹೆಚ್ಚು ನೀರು ಹರಿಸಲು ಸಾಧ್ಯವಾಗುತ್ತಿದೆ. ನೀರು ಹರಿಯುವ ಸಮಗ್ರ ಮಾಹಿತಿ ದಾಖಲಾಗುವುದರಿಂದ ನಿರ್ವಹಣೆ ಸುಲಭವಾಗುತ್ತದೆ.

ಪ್ರಧಾನಿ ಮೋದಿಯವರು ಯಾದಗಿರಿ ಜಿಲ್ಲೆಯ ಹಳ್ಳಿಗಳಿಗೆ ನೀರೊದಗಿರುವ ನಾರಾಯಣಪುರ ಎಡದಂಡೆ ಕಾಲುವೆಯ ಸ್ಕಾಡಾ ಗೇಟ್ ಗಳಿಗೆ ಚಾಲನೆ ನೀಡಿದರು. 

bengaluru bengaluru

ಪ್ರತಿ ಹನಿ ನೀರನ್ನೂ ಸಮಗ್ರವಾಗಿ ಬಳಸಬೇಕು ಎಂಬ ಮೋದಿ ಅವರ ಆಶಯವನ್ನು ಸಾಕಾರಗೊಳಿಸಲು ನಾವು ಶ್ರಮಿಸುತ್ತಿದ್ದೇವೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆ ಆರಂಭವಾಗಿತ್ತು. ಆದರೆ ನಂತರ ಯುಪಿಎ ಸರ್ಕಾರದಿಂದ ನಮಗೆ ಬರಬೇಕಿದ್ದ ಈ ಯೋಜನೆ ತಡವಾಯಿತು. ಮುಂದೆ 2014ರಲ್ಲಿ ಮೋದಿ ಪ್ರಧಾನಿಯಾದ ನಂತರ 2015ರಲ್ಲಿ ತ್ವರಿತಗತಿಯ ಯೋಜನೆಯಲ್ಲಿ ಈ ಕಾಮಗಾರಿ ಆರಂಭವಾಯಿತು ಎಂದು ಸಿಎಂ ಬೊಮ್ಮಾಯಿ ಹೇಳಿದರು. 

ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ @narendramodi ಅವರಿಂದ ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನಾ ಸಮಾರಂಭ, ಕೊಡೇಕಲ್, ಯಾದಗಿರಿ. https://t.co/6ZNVmLal4r
— CM of Karnataka (@CMofKarnataka) January 19, 2023

ಈ ವೇಳೆ ಅವರು, ಸುರಪುರದ ರಾಜಮನೆತನದ ಕೊಡುಗೆಯನ್ನು ಸ್ಮರಿಸಿದರು. ರಾಜಾ ವೆಂಕಟಪ್ಪನಾಯಕರ ಸ್ವಾತಂತ್ರ್ಯ ಹೋರಾಟವನ್ನು ವಿವರಿಸಿದರು.

ಇದಕ್ಕೂ ಮುನ್ನ ಮಾತನಾಡಿದ ನೀರಾವರಿ ಸಚಿವ ಗೋವಿಂದ ಕಾರಜೋಳ, ಕರ್ನಾಟಕದಲ್ಲಿ ಸುಮಾರು 40.6 ಲಕ್ಷ ಹೆಕ್ಟೇರ್ ನೀರಾವರಿಗೆ ಅವಕಾಶವಿದೆ. 30 ಲಕ್ಷ ಹೆಕ್ಟೇರ್​ಗೆ ಈಗಾಗಲೇ ನೀರಾವರಿಗೆ ಸೌಲಭ್ಯ ಸಿಕ್ಕಿದೆ. ಕೃಷ್ಣ ನ್ಯಾಯಾಧಿಕರಣದ ವಿಚಾರವನ್ನು ಪ್ರಧಾನಿ ಗಮನಕ್ಕೆ ತರಲು ಬಯಸುತ್ತೇನೆ. ಅವರೇ ಈ ಯೋಜನೆಗೆ ಅಡಿಗಲ್ಲು ಹಾಕಬೇಕು ಎಂದು ಕಾರಜೋಳ ವಿನಂತಿಸಿದರು.

ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ @narendramodi ಅವರಿಂದ ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನಾ ಸಮಾರಂಭ, ಕೊಡೇಕಲ್, ಯಾದಗಿರಿ. https://t.co/6ZNVmLal4r
— CM of Karnataka (@CMofKarnataka) January 19, 2023


bengaluru

LEAVE A REPLY

Please enter your comment!
Please enter your name here