ಮೈಸೂರು:
ಕೋವಿಡ್–19 ನಿಯಂತ್ರಣಕ್ಕೆ ಸಂಬಂಧಿಸಿ ಹೊಸದಾಗಿ ವಿಧಿಸಲಾಗಿರುವ ನಿರ್ಬಂಧಗಳಲ್ಲಿ ಸಡಿಲಿಕೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಮತ್ತು ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್ ಪ್ರಕರಣಗಳು ನಿಯಂತ್ರಣದಲ್ಲಿ ಇವೆ. ಆದರೆ ನೆರೆ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಸ್ವಲ್ಪ ಹೆಚ್ಚಳ ಕಂಡುಬರುತ್ತಿದೆ. ಈ ಎಲ್ಲ ವಿಚಾರಗಳನ್ನು ಗಮನದಲ್ಲಿ ಇಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಫೆಬ್ರುವರಿ ವೇಳೆಗೆ ಕೋವಿಡ್ ಪ್ರಕರಣಗಳು ಹೆಚ್ಚಾಗಲಿವೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವುಗಳೆಲ್ಲ ಕೇವಲ ಮುನ್ಸೂಚನೆಗಳಷ್ಟೆ.
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು (ಭಾನುವಾರ) ಬೆಳಿಗ್ಗೆ ನಡೆದ ಉನ್ನತ ಮಟ್ಟದ ಸಭೆ ನಡೆದಿತ್ತು. ಬಳಿಕ ರಾಜ್ಯದಲ್ಲಿ ಡಿಸೆಂಬರ್ 28ರಿಂದ ಪ್ರತಿ ದಿನ ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ತೀರ್ಮಾನಿಸಲಾಗಿರುವುದಾಗಿ ಸರ್ಕಾರ ಘೋಷಿಸಿತ್ತು.
ಇದನ್ನೂ ಓದಿ: ಕೋವಿಡ್-19: ಕರ್ನಾಟಕದಲ್ಲಿ ಡಿಸೆಂಬರ್ 28 ರಿಂದ 10 ದಿನಗಳವರೆಗೆ ರಾತ್ರಿ ಕರ್ಫ್ಯೂ
ಹೊಸ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿತ್ತು. ಕೋವಿಡ್ ಪ್ರಕರಣಗಳ ಸಂಖ್ಯೆ ಆಧರಿಸಿ ಹತ್ತು ದಿನಗಳ (ಜನವರಿ 7) ಬಳಿಕ ಮುಂದಿನ ಕ್ರಮದ ಕುರಿತು ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಭೆಯ ಬಳಿಕ ತಿಳಿಸಿದ್ದರು.
Also Read: COVID-19: Night curfew in Karnataka for 10 days from December 28
Also Read: Karnataka gears to vaccinate 43 lakh children in 15-18 age group