Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಕಂಪ್ಯೂಟರ್
  • ಶಿಕ್ಷಣ
  • ಬೆಂಗಳೂರು ನಗರ

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಕಂಪ್ಯೂಟರ್

The Bengaluru Live February 26, 2021 3:30 PM 1 minute read
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಕಂಪ್ಯೂಟರ್

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಕಂಪ್ಯೂಟರ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

‌ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ -ರೋಟರಿ ಕ್ಲಬ್ ಜತೆ ಸರಕಾರದ ಒಪ್ಪಂದ

ನಗರ-ಗ್ರಾಮೀಣ ವಿದ್ಯಾರ್ಥಿಗಳ ಡಿಜಿಟಲ್‌ ಅಂತರ ಅಳಿಸಲು ಶಿಕ್ಷಣಕ್ಕೆ ಸಹಾಯ: ಡಿಸಿಎಂ

ಬೆಂಗಳೂರು:

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಂಡಿರುವ ‘ಶಿಕ್ಷಣಕ್ಕೆ ಸಹಾಯ’ ದ (Help Educate) ಉಪಕ್ರಮದ ಅಂಗವಾಗಿ ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಡೆಸ್ಕ್‌ಟಾಪ್ ಕಂಪ್ಯೂಟರ್‌ಗಳನ್ನು ನೀಡುವ ಬಗ್ಗೆ ಮಹತ್ವದ ಒಪ್ಪಂದ ಏರ್ಪಟ್ಟಿದೆ.

ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರ ಪರಿಕಲ್ಪನೆಯಂತೆ ಈ ಒಪ್ಪಂದ ಆಗಿದ್ದು, ನಗರ- ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ನಡುವೆ ಡಿಜಿಟಲ್‌ ಅಂತರವನ್ನು ಆಳಿಸಿಹಾಕಲು ಈ ಉಪಕ್ರಮ ಪೂರಕವಾಗಲಿದೆ.

ಈ ಕುರಿತು ತಿಳುವಳಿಕೆ ಪತ್ರಕ್ಕೆ ಶುಕ್ರವಾರ ಉಪ ಮುಖ್ಯಮಂತ್ರಿಗಳ ಸಮಕ್ಷಮದಲ್ಲಿ ಸಹಿ ಹಾಕಲಾಗಿದ್ದು, ಇದರಲ್ಲಿ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ (ಡಿಸಿಟಿಇ), ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ರೋಟರಿ ಕ್ಲಬ್ ವೈಟ್‌ಫೀಲ್ಡ್ ಸೆಂಟ್ರಲ್ (ಜಿಲ್ಲೆ 1390) ವತಿಯಿಂದ ಸಹಿ ಬಿದ್ದಿದೆ.

ಈ ಕಾರ್ಯಕ್ರಮದಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವಂತೆ ಮತ್ತು ವಿದ್ಯಾರ್ಥಿಗಳ ಕಲಿಕೆಯಲ್ಲಿ ವ್ಯತ್ಯಾಸವನ್ನುಂಟು ಮಾಡುವ ಪ್ರಮುಖ ಉದ್ದೇಶವನ್ನು ಹೊಂದಿದೆ, ಅವರಲ್ಲಿ ಹೆಚ್ಚಿನವರು ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು ಒಪ್ಪಂದಕ್ಕೆ ಅಂಕಿತ ಬಿದ್ದ ನಂತರ ಸುದ್ದಿಗಾರರಿಗೆ ತಿಳಿಸಿದರು.

ಶಿಕ್ಷಣದಲ್ಲಿ ಮಹತ್ವದ ಬದಲಾವಣೆ:

“ಶಿಕ್ಷಣಕ್ಕೆ ಸಹಾಯ” ಮಾಡುವ ಈ ಕಾರ್ಯಕ್ರಮದ ಅಡಿಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಕಾರ್ಪೊರೇಟ್ ಕಂಪನಿಗಳು ಮತ್ತು ದಾನಿಗಳ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಕಲಿಕೆ ಬಗ್ಗೆ ತರಬೇತಿ ನೀಡಲಾಗುವುದು. ಬೋಧಕ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮಗಳು, ಡಿಜಿಟಲ್ ಬೋಧನೆಯ ಮೂಲಕ ಆಧುನಿಕ ವಿಧಾನದಲ್ಲಿ ಪ್ರಾಧ್ಯಾಪಕರು ಅಪ್‌ಗ್ರೇಡ್‌ ಆಗಲು ಇದರಿಂದ ಸಾಧ್ಯವಿದೆ. ಜತೆಗೆ, ಡಿಜಿಟಲ್ ಕಲಿಕೆ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಸರಕಾರಿ ಕಾಲೇಜುಗಳನ್ನು ಸಜ್ಜುಗೊಳಿಸುವ ಅಂಶವೂ ಇದರಲ್ಲಿ ಸೇರಿದೆ ಎಂದರು ಡಿಸಿಎಂ.

ಸರ್ಕಾರದ ಈ ಮಹತ್ವಾಕಾಂಕ್ಷೆ ಯೋಜನೆಯ ಅನುಷ್ಠಾನಕ್ಕೆ ನೆರವಾಗುತ್ತಿರುವ @rotary_india, @Cognizant ಸಂಸ್ಥೆಗಳಿಗೆ ಹೃತ್ಪೂರ್ವಕ ಕೃತಜ್ಞತೆಗಳು.

ಗ್ರಾಮೀಣ ಪ್ರದೇಶಗಳಲ್ಲಿ 'ಡಿಜಿಟಲ್ ಅಂತರ'ದ ಕಾರಣಕ್ಕಾಗಿ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ತೊಡಕಾಗದಿರಲಿ ಎಂಬುದು ಈ ಉಪಕ್ರಮದ ಸದುದ್ದೇಶವಾಗಿದೆ.@CMofKarnataka @KarnatakaVarthe

2/2

— Dr. Ashwathnarayan C. N. (@drashwathcn) February 26, 2021

30,000 ಕಂಪ್ಯೂಟರ್‌ಗಳ ಅಗತ್ಯ:

ಸರಕಾರಿ ಕಾಲೇಜುಗಳಿಗೆ ಸುಮಾರು 30,000 ಕಂಪ್ಯೂಟರ್‌ಗಳು ಅಗತ್ಯ ಇದ್ದು, ಆ ಪೈಕಿ ಈಗ 12,500 ಕಂಪ್ಯೂಟರ್‌ಗಳನ್ನು ಒದಗಿಸಲಾಗಿದೆ. ಸುಮಾರು 50 ಕೋಟಿ ರೂ.ಗಳ ಯೋಜನೆ ಇದಾಗಿದ್ದು, ವಿದ್ಯಾರ್ಥಿಗಳನ್ನು ಆಧುನಿಕ ಕಲಿಕೆಯತ್ತ ಕರೆದೊಯ್ಯಲು, ಡಿಜಿಟಲ್ ತಾರತಮ್ಯವನ್ನು ನಿವಾರಿಸುವ ಈ ಉದಾತ್ತ ಉದ್ದೇಶಕ್ಕೆ ಖಾಸಗಿ ಸಂಘ ಸಂಸ್ಥೆಗಳು ಸರಕಾರದ ಜತೆ ಕೈಜೋಡಿಸುತ್ತಿರುವುದು ಸಂತೋಷ ಉಂಟು ಮಾಡಿದೆ. ಇನ್ನೂ ಅನೇಕ ದಾನಿಗಳು ಶಿಕ್ಷಣಕ್ಕೆ ಸಹಾಯ ಮಾಡಲು ಮುಂದೆ ಬಂದಿದ್ದಾರೆ ಎಂದರು ಉಪ ಮುಖ್ಯಮಂತ್ರಿ.

ಈ ಉದಾತ್ತ ಕಾರ್ಯಕ್ರಮದ ಅಡಿಯಲ್ಲಿ ಕಾಗ್ನಿಜೆಂಟ್ ಇಂಡಿಯಾ ಪ್ರೈ. ಲಿಮಿಟೆಡ್ ಇಲಾಖೆಗೆ 12,500 ಡಿ-ಬಾಂಡೆಡ್, ಡೆಸ್ಕ್‌ಟಾಪ್ ಕಂಪ್ಯೂಟರ್‌ಗಳನ್ನು ಒದಗಿಸಲು ಸ್ವಯಂ ಪ್ರೇರಿತವಾಗಿ ಮುಂದೆ ಬಂದಿದೆ. ಇದರೊಂದಿಗೆ ವಿದ್ಯಾರ್ಥಿಗಳ ಬಳಕೆಗಾಗಿ ಎಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಂಪ್ಯೂಟರ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು. ಇನ್ನೂ ರೋಟರಿ ಕ್ಲಬ್‌ನವರು  ವಿಂಡೋಸ್ ಓಎಸ್ ಒದಗಿಸಲಿದ್ದಾರೆ. ನಂತರ ಕಂಪ್ಯೂಟರ್ ಗಳನ್ನು ನಿಗದಿತ ಕಾಲೇಜುಗಳಿಗೆ ತಲುಪಿಸುವ ಕೆಲಸ‌ ಮಾಡಲಿದ್ದಾರೆ ಎಂದು ಡಿಸಿಎಂ ಮಾಹಿತಿ ಕೊಟ್ಟರು.

ಕಾಗ್ನಿಜೆಂಟ್ ಸಂಸ್ಥೆಯ ಬೆಂಗಳೂರು ಕೇಂದ್ರದ ಮುಖ್ಯಸ್ಥ ನವೀನ್ ರಾವ್ ಮಾತನಾಡಿ;  “ಕಾಲೇಜು  ಶಿಕ್ಷಣ ಇಲಾಖೆಯ ನೇತೃತ್ವದ ಈ ನಿರ್ಣಾಯಕ ಉಪಕ್ರಮದ ಭಾಗವಾಗಿರುವುದಕ್ಕೆ ನಮಗೆ ಸಂತೋಷವಾಗಿದೆ. ಡಿಜಿಟಲ್‌ ಕಲಿಕೆಯನ್ನು ಉತ್ತೇಜಿಸುವ ಈ ಕಾರ್ಯಕ್ರಮ ಅರ್ಥಪೂರ್ಣವಾದದ್ದು” ಎಂದರು.

ಡಿಜಿಟಲ್‌ ವೇದಿಕೆಯಲ್ಲಿರುವ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ ಮೂಲಕ ಕಲಿಯುವ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಸಹಾಯ ಕಾರ್ಯಕ್ರಮ ಪೂರಕ. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚು ಉಪಯುಕ್ತ ಎಂದು ರೋಟರಿ ಕ್ಲಬ್‌ ಜಿಲ್ಲಾ ಗರ್ವನರ್ ನಾಗೇಂದ್ರ ಪ್ರಸಾದ್ ಅವರು ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್ ಪ್ರಭಾಕರ್ ಅವರು ಯೋಜನೆ ಕುರಿತು ಮಾಹಿತಿ‌ ನೀಡಿದರು.‌ ಕಾಗ್ನಿಜೆಂಟ್ ಸಂಸ್ಥೆಯ ನಿರ್ದೇಶಕ (ಸಿಎಸ್‌ಆರ್) ದೀಪಕ್ ಪ್ರಭು, ಸಂಸ್ಥೆಯ ಸಹಾಯಕ ಉಪಾಧ್ಯಕ್ಷ ಹರಿಸಿಂಗ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಬೆಳಗಾವಿ ಮೃಗಾಲಯಕ್ಕೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಸಿಂಹಗಳ ಉಡುಗೊರೆ
Next: ಮಾರ್ಚ್‌ 2ರಂದು ಎಂಜಿನಿಯರಿಂಗ್‌ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ ಲೋಕಾರ್ಪಣೆ

Related Stories

ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM
ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

The Bengaluru Live November 13, 2026 4:40 PM

Latest Post

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

November 13, 2026 7:55 PM
ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

November 13, 2026 7:40 PM
ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

November 13, 2026 4:40 PM
ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಎಕ್ಸ್ ಪೋಸ್ಟ್ ಸ್ಕ್ರಿನ್ಶಾಟ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

November 13, 2026 4:22 PM
ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ ಪ್ರಧಾನಿ ನರೇಂದ್ರ ಮೋದಿಗೆ ಮೈಸೂರಿನಲ್ಲಿ ಸ್ವಾಗತ
  • ಕರ್ನಾಟಕ
  • ಸಿನಿಮಾ

ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ

November 13, 2026 4:13 PM
ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ ನಮ್ಮ ಮೆಟ್ರೋ ನಿಲ್ದಾಣದ ಮಾದರಿಯನ್ನು ವೀಕ್ಷಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ

November 13, 2026 3:14 PM

ನೀವು ತಪ್ಪಿಸಿಕೊಂಡಿರಬಹುದು

ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM
ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

The Bengaluru Live November 13, 2026 4:40 PM
ಸಿಎಂ ಡಿ.ಕೆ. ಶಿವಕುಮಾರ್ ಅವರ ಎಕ್ಸ್ ಪೋಸ್ಟ್ ಸ್ಕ್ರಿನ್ಶಾಟ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

The Bengaluru Live November 13, 2026 4:22 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ
  • ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ
  • ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ
  • ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ
©Copyright 2025 The Bengaluru Live All rights reserved. | MoreNews by AF themes.