Home ಬೆಂಗಳೂರು ನಗರ ಮಾರ್ಚ್ 3 ರಿಂದ 13 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

ಮಾರ್ಚ್ 3 ರಿಂದ 13 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

79
0
13th Bengaluru International Film Festival from March 3
Advertisement
bengaluru

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ಶುಭ ಕೋರಿದ ಸಿ.ಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ 13 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಮಾರ್ಚ್ 3 ರಿಂದ ಹತ್ತು ದಿನಗಳ ಕಾಲ 13 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಕೋವಿಡ್ ನಿಯಮಗಳನ್ನು ಅನುಸರಿಸಿ ಆಯೋಜಿಸಲು ತೀರ್ಮಾನಿಸಲಾಯಿತು.

FIAP ಮನ್ನಣೆ: ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂಟರ್ ನ್ಯಾಷನಲ್ ಫೆಡರೇಷನ್ ಆಫ್ ಫಿಲಂ ಪ್ರೊಡ್ಯೂಸರ್ಸ್ ಅಸೋಸಿಯೇಷನ್ ಮಾನ್ಯತೆ ನೀಡಿದೆ. ಈ ಮೂಲಕ ಚಿತ್ರೋತ್ಸವಕ್ಕೆ ಜಾಗತಿಕ ಮನ್ನಣೆ ದೊರೆತಿದೆ. ವಿಶ್ವದ 45 ಜಾಗತಿಕ ಮಟ್ಟದ ಚಲನಚಿತ್ರೋತ್ಸವಗಳ ಪೈಕಿ ಬೆಂಗಳೂರು ಸೇರಿರುವುದು ಹೆಮ್ಮೆಯ ಸಂಗತಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

13th Bengaluru International Film Festival from March 3

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ಗಮ್ಯವಾಗಬೇಕು ಇತರೆ ದೇಶಗಳಿಗಿಂತ ಮುನ್ನವೇ ಕನ್ನಡ ಚಲನಚಿತ್ರಗಳು ಹಲವಾರು ಪ್ರಯೋಗಗಳನ್ನು ಮಾಡಿ ಯಶಸ್ವಿಯಾಗಿದೆ. ಚಿತ್ರೋತ್ಸವದಲ್ಲಿ ಅತ್ಯುತ್ತಮವಾದ ಕಲಾತ್ಮಕ ಕನ್ನಡ ಚಿತ್ರಗಳನ್ನು ಪ್ರದರ್ಶಿಸಬೇಕು. ಗುಣಮಟ್ಟಕ್ಕೆ ಆದ್ಯತೆ ನೀಡಿ ಅರ್ಥಪೂರ್ಣ ಚಿತ್ರಗಳಿಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಬೆಂಗಳೂರನ್ನು ಅಂತರರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ಗಮ್ಯವಾಗಿಸಬೇಕು ಎಂದು ಸಲಹೆ ನೀಡಿದರು.

bengaluru bengaluru

ಸಾಮಾಜಿಕ ಸಂದೇಶ: ಕನ್ನಡಿಗರಿಗೆ ಜಾಗತಿಕ ಚಿತ್ರಗಳನ್ನು ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಚಿತ್ರಗಳನ್ನು ಪ್ರದರ್ಶಿಸಲು ಚಿತ್ರೋತ್ಸವ ವೇದಿಕೆಯಾಗಬೇಕು. ಸಾಮಾಜಿಕ ಬದುಕಿನಲ್ಲಿ ಮನರಂಜನೆ ಹಾಸುಹೊಕ್ಕಾಗಿರುವುದರಿಂದ ಚಲನಚಿತ್ರಗಳು ಮುಖ್ಯವಾಗುತ್ತವೆ. ಚಿತ್ರೋತ್ಸವದ ಮೂಲಕ ಸಾಮಾಜಿಕ ಸಂದೇಶವನ್ನು ನೀಡಬೇಕು. ಸಿನಿಮಾಗಳಲ್ಲಿ ಆಸಕ್ತಿ ಇರುವ ನಿರ್ದಿಷ್ಟ ಜನ ಚಲನಚಿತ್ರೋತ್ಸವಕ್ಕೆ ಆಗಮಿಸುವುದರಿಂದ ನಿರ್ದಿಷ್ಟ ವಿಷಯವನ್ನು ಆಧರಿಸಿ ಚಲನಚಿತ್ರೋತ್ಸವಕ್ಕೆ ನಡೆಸುವುದು ಅಗತ್ಯ ಎಂದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಚಲನಚಿತ್ರೋತ್ಸವದ ಲೋಗೋ ಬಿಡುಗಡೆ ಮಾಡಿದರು.

ತೋಟಗಾರಿಕಾ ಸಚಿವ ಮುನಿರತ್ನ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಂ, ಸಂಘಟನಾ ಸಮಿತಿ ಸದಸ್ಯರಾದ ಖ್ಯಾತ ಕಲಾವಿದೆ ಸುಧಾರಾಣಿ, ಕಲಾ ನಿರ್ದೇಶಕ ಶಶಿಧರ್ ಅಡಪ, ಕಲಾವಿದೆ ಸೋನುಗೌಡ, ಕಲಾ ನಿರ್ದೇಶಕ ಹೆಚ್.ಎನ್.ನರಹರಿರಾವ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್,ಆಯುಕ್ತ ಪಿ.ಎಸ್.ಹರ್ಷಾ ಉಪಸ್ಥಿತರಿದ್ದರು.

Also Read: Karnataka to host 13th Bengaluru International Film Festival from March 3


bengaluru

LEAVE A REPLY

Please enter your comment!
Please enter your name here