ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ರಾಜ್ಯ ಸರ್ಕಾರದ 14 ಅಧಿಕಾರಿಗಳಿಗೆ ಸೇರಿದ 45 ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಇದುವರೆಗೆ 13 ಪ್ರಕರಣಗಳನ್ನು ದಾಖಲಿಸಿದ್ದಾರೆ. ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ರಾಜ್ಯ ಸರ್ಕಾರದ 14 ಅಧಿಕಾರಿಗಳಿಗೆ ಸೇರಿದ 45 ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಇದುವರೆಗೆ 13 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಪ್ರಕಟಣೆ ಪ್ರಕಾರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಂದಾಯ ನಿರೀಕ್ಷಕ ಎಸ್.ನಟರಾಜ್, ತಹಶೀಲ್ದಾರ್ ಶಿವರಾಜು, ಚಿಕ್ಕಜಾಲ ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮೀಪತಿ, ತುಮಕೂರು ಜಿಲ್ಲಾ ಪಂಚಾಯಿತಿ ಕುಂದುಕೊರತೆ ನಿವಾರಣಾ ವೇದಿಕೆ ಮುಖ್ಯಸ್ಥ ಭುವನಹಳ್ಳಿ ನಾಗರಾಜ್, ಬಿಬಿಎಂಪಿ ಕೆರೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎಸ್.ಭಾರತಿ, ಚಿತ್ರದುರ್ಗದ ಸಹಾಯಕ ಎಂಜಿನಿಯರ್ ಕೆ.ಮಹೇಶ್, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕ ಕೆ.ಎನ್.ನಾಗರಾಜು, ಮಡಿಕೇರಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ನೀರಾವರಿ ಇಲಾಖೆ ಕೊಡಗು ಅಧೀಕ್ಷಕ ಎಂಜಿನಿಯರ್ ಕೆ.ಕೆ.ರಘುಪತಿ ಸೇರಿದಂತೆ 14 ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉಳಿದಂತೆ ಆರ್‌ಎಫ್‌ಒ ಎಸ್.ಸತೀಶ್, ಕೊಪ್ಪಳ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ಮಂಜುನಾಥ, ಬೀದರ್ ಪೊಲೀಸ್ ಪೇದೆ ವಿಜಯಕುಮಾರ್, ಬೆಳಗಾವಿ ಮಹಾನಗರ ಪಾಲಿಕೆ ಆರ್‌ಐ ಸಂತೋಷ ಶರಣಪ್ಪ ಅನ್ನಿಶೆಟ್ಟಿ, ಧಾರವಾಡ ಪೊಲೀಸ್ ಪೇದೆ ಶಿವಾನಂದ ಮಾನಕರ ಅವರ ಮೇಲೂ ದಾಳಿ ನಡೆಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಇದನ್ನು ಓದಿ: ಸಾರ್ವಜನಿಕರಿಂದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ವ್ಯಾಪಕ ದೂರು ಬಂದ ಹಿನ್ನೆಲೆ ಲೋಕಾಯುಕ್ತ ಸಾಮೂಹಿಕ ದಾಳಿ
ಇಂದು ಬೆಳಗ್ಗೆ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ, ಶೋಧ ನಡೆಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.