Home Uncategorized 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ವಿಶೇಷ ಅನುದಾನ ಬಿಡುಗಡೆ ಮಾಡಿ: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ...

15ನೇ ಹಣಕಾಸು ಆಯೋಗದ ಶಿಫಾರಸಿನಂತೆ ವಿಶೇಷ ಅನುದಾನ ಬಿಡುಗಡೆ ಮಾಡಿ: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

13
0

15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕರ್ನಾಟಕಕ್ಕೆ 5,495 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಬೆಂಗಳೂರು: 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕರ್ನಾಟಕಕ್ಕೆ 5,495 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‍ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, 15ನೇ ಹಣಕಾಸು ಆಯೋಗದ 2020-21ರ ಪ್ರಕಾರ ವಿಶೇಷ ಅನುದಾನವಾಗಿ 5,495 ಕೋಟಿ ರೂ. ಶಿಫಾರಸು ಮಾಡಲಾಗಿತ್ತು. ಆದರೆ, ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನ ಬಿಡುಗಡೆಯಾಗಿಲ್ಲ. ಹೀಗಾಗಿ, ತಕ್ಷಣ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

2021-22ರಲ್ಲಿ ಹಣಕಾಸು ಆಯೋಗ 6 ಸಾವಿರ ಕೋಟಿ ರೂ. ಅನ್ನು ಬೆಂಗಳೂರಿನ ನೀರಾವರಿ ಕಾಮಗಾರಿ ಮತ್ತು ಪೆರಿಫರಲ್ ರಸ್ತೆ ನಿರ್ಮಾಣಕ್ಕೆ ನೀಡಿತ್ತು. ಆದರೆ ಯಾವುದೇ ಅನುದಾನ ರಾಜ್ಯ ಸರ್ಕಾರಕ್ಕೆ ನೀಡಿಲ್ಲ. ಇದರಿಂದ ರಾಜ್ಯದ ಹಣಕಾಸು ಸ್ಥಿತಿಗೆ ಹಿನ್ನಡೆಯಾಗಿದೆ. ರಾಜ್ಯದ ಹಣಕಾಸು ಸ್ಥಿತಿಯನ್ನು ಅರ್ಥಮಾಡಿಕೊಂಡು ವಿಶೇಷ ಅನುದಾನ ಮತ್ತು ನಿರ್ದಿಷ್ಟ ಅನುದಾನಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಿವಿಗಳು ಮೌಢ್ಯರಹಿತ, ವೈಚಾರಿಕತೆ ಬೆಳೆಸುವ ಶಿಕ್ಷಣ ನೀಡಬೇಕು: ಸಿಎಂ ಸಿದ್ದರಾಮಯ್ಯ

14ನೆ ಹಣಕಾಸು ಆಯೋಗವು 2020-21 ರಿಂದ 2025-26ನೆ ಸಾಲಿಗೆ ತೆರಿಗೆ ಹಂಚಿಕೆಯಲ್ಲಿ ರಾಜ್ಯದ ಪಾಲನ್ನು ಶೇ.4.71ರಷ್ಟು ನಿಗದಿ ಮಾಡುವಂತೆ ಶಿಫಾರಸ್ಸು ಮಾಡಿದ್ದರೂ 15ನೆ ಹಣಕಾಸು ಆಯೋಗವು ಈ ಪ್ರಮಾಣವನ್ನು ಶೇ.3.647ಕ್ಕೆ ಇಳಿಸಿದೆ. ಹಣಕಾಸು ಆಯೋಗವು ಅಳವಡಿಸಿಕೊಂಡಿರುವ ಮಾನದಂಡದಿಂದಾಗಿ ರಾಜ್ಯಕ್ಕೆ ಬಹುದೊಡ್ಡ ನಷ್ಟವಾಗಿದೆ.

2011-12ರಲ್ಲಿ ಎಲ್ಲ ರಾಜ್ಯಗಳ ಜಿಎಸ್‍ಡಿಪಿ ಸರಾಸರಿ ಶೇ.9ಕ್ಕಿಂತ ಕಡಿಮೆ ಇದ್ದರೆ, ನಮ್ಮ ರಾಜ್ಯದ ಜಿಎಸ್‍ಡಿಪಿಯನ್ನು ಶೇ.30ರಷ್ಟು ಹೆಚ್ಚಿಸಲಾಗಿದೆ. 15ನೆ ಹಣಕಾಸು ಆಯೋಗದ ಶಿಫಾರಸ್ಸಿನಂತೆ ರಾಜ್ಯಕ್ಕೆ ಯಾವುದೆ ವಿಶೇಷ ಅನುದಾನ ಬಿಡುಗಡೆಯಾಗಿಲ್ಲ. ಹಾಗಾಗಿ ಕೂಡಲೇ 5495 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

2011-12ರಲ್ಲಿ ಐಟಿ ಸಂಬಂಧಿತ ಸೇವೆಗಳಲ್ಲಿ ರಾಜ್ಯದ ಜಿಎಸ್‍ಡಿಪಿ ಗಣನೀಯವಾಗಿ ಹೆಚ್ಚಳವಾಗಿದೆಯಾದರೂ ಐಟಿ ಸೇವೆಗಳ ರಫ್ತು ಶೂನ್ಯ ದರವನ್ನು ಹೊಂದಿರುವುದರಿಂದ ರಾಜ್ಯದ ತೆರಿಗೆಗಳಿಗೆ ಈ ಸೇವೆಗಳು ಯಾವುದೆ ಸಹಕಾರಿಯಾಗಿಲ್ಲ. 14ನೆ ಹಣಕಾಸು ಆಯೋಗದ ಶಿಫಾರಸಿಗೆ ಹೋಲಿಸಿದರೆ 15ನೆ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ತೆರಿಗೆ ಹಂಚಿಕೆ ಪಾಲು ಕಡಿಮೆಯಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯಕ್ಕೆ ಒಟ್ಟು ತೆರಿಗೆ ಹಂಚಿಕೆಯಲ್ಲಿ 37,011 ಕೋಟಿ ರೂ.ಕಡಿಮೆಯಾಗಿದೆ.

ಇದನ್ನೂ ಓದಿ: ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಪ್ರತ್ಯೇಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಸಂಪನ್ಮೂಲಗಳು ಮತ್ತು ಕೇಂದ್ರ ಸರಕಾರದ ಹಣಕಾಸಿನ ಬದ್ಧತೆಗಳನ್ನು ಗಮನದಲ್ಲಿಟ್ಟುಕೊಂಡು, ವಿಶೇಷ ಅನುದಾನಗಳ ಶಿಫಾರಸನ್ನು ಸೂಕ್ತವಾಗಿ ಪರಿಗಣಿಸಲಾಗುವುದು ಎಂದು ಹೇಳಿದೆ. ಆದರೆ, ಕರ್ನಾಟಕ ರಾಜ್ಯಕ್ಕೆ ಇದುವರೆಗೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಮತ್ತು ತೆರಿಗೆ ಹಂಚಿಕೆಯಲ್ಲಿ ತೀವ್ರ ಕಡಿತ ಮಾಡಲಾಗಿದೆ. ಈಗಾಗಲೇ ಸಂಕಷ್ಟದಲ್ಲಿರುವ ರಾಜ್ಯದ ಹಣಕಾಸಿನ ಸ್ಥಿತಿಗೆ ಇದು ದೊಡ್ಡ ಹಿನ್ನಡೆಯಾಗಿದೆ.

2021-26ನೆ ಸಾಲಿನಲ್ಲಿ ಹಣಕಾಸು ಆಯೋಗ 6 ಸಾವಿರ ಕೋಟಿ ರೂ.ಗಳನ್ನು ಬೆಂಗಳೂರಿನ ನೀರಾವರಿ ಕಾಮಗಾರಿ ಹಾಗೂ ಪೆರಿಪೆಲರ್ ರಸ್ತೆ ನಿರ್ಮಾಣಕ್ಕೆ ನೀಡಿತ್ತು. ಆದರೆ, ಯಾವುದೇ ಅನುದಾನ ಕರ್ನಾಟಕ ಸರ್ಕಾರಕ್ಕೆ ನೀಡಿಲ್ಲ. ಇದರಿಂದ ರಾಜ್ಯದ ಹಣಕಾಸು ಸ್ಥಿತಿಗೆ ಹಿನ್ನಡೆ ಆಗಿದೆ. ರಾಜ್ಯದ ಹಣಕಾಸು ಸ್ಥಿತಿಯನ್ನು ಅರ್ಥಮಾಡಿಕೊಂಡು ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here