ನೆಲಮಂಗಲ/ಬೆಂಗಳೂರು ಗ್ರಾಮಾಂತರ: 15 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಜರುಗಿದೆ.
ಘಟನೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ. ಬಾಲಕಿ ಕಿರುಚಾಡದಂತೆ ಬಾಯಿಗೆ ಬಟ್ಟೆ ತುರುಕಿ ವೃದ್ಧ ಅತ್ಯಾಚಾರ ನಡೆಸಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಅತ್ಯಾಚಾರವೆಸಗಿದ ವೃದ್ಧನಿಗೆ ಥಳಿಸಿದ ಸ್ಥಳೀಯರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದಿದ್ದಾಗ ವೃದ್ಧ ಈ ಅತ್ಯಾಚಾರ ನಡೆಸಿದ್ದಾನೆ. ಎದುರು ಮನೆಯ ಮಹಿಳೆಯಿಂದ ಘಟನೆ ಬೆಳಕಿಗೆ ಬಂದಿದೆ. ಬಾಲಕಿ ಕಿರುಚದಂತೆ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ನಡೆಸಲಾಗಿತ್ತು. ವಿಕೃತಿ ಮೆರೆದ ವೃದ್ದನಿಗೆ ಗ್ರಾಮಸ್ಥರು ಹಲ್ಲೆ ನಡೆಸಿದ್ದರು. ಹಲ್ಲೆ ಬಳಿಕ ಪೊಲೀಸರಿಗೆ ಫೋನ್ ಮಾಡಿದ್ದಾರೆ. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.