Home ಬೆಂಗಳೂರು ನಗರ 150 crore worth of land in HBR Layout has been seized by...

150 crore worth of land in HBR Layout has been seized by the Bengaluru Development Authority (BDA) | ಎಚ್‍ಬಿಆರ್ ಬಡಾವಣೆಯಲ್ಲಿ 150 ಕೋಟಿ ರೂ.ಮೌಲ್ಯದ ಜಾಗ ವಶಕ್ಕೆ ಪಡೆದ ಬಿಡಿಎ

42
0
150 crore worth of land in HBR Layout has been seized by the Bengaluru Development Authority (BDA)

ಬೆಂಗಳೂರು:

ನಗರದಲ್ಲಿರುವ ಎಚ್‍ಬಿಆರ್ ಬಡಾವಣೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸೇರಿರುವ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಕಟ್ಟಡಗಳನ್ನು ತೆರವುಗೊಳಿಸಿ, 150 ಕೋಟಿ ರೂ. ಬೆಲೆಬಾಳುವ ಜಾಗವನ್ನು ಶನಿವಾರದಂದು ಬಿಡಿಎ ವಶಕ್ಕೆ ಪಡೆದಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಸ್ತಿ ಎಂದು ಕರ್ನಾಟಕ ರಾಜ್ಯ ಸರ್ಕಾರ 1985ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಸುಮಾರು ರೂ 150 ಕೋಟಿ ಬೆಲೆಬಾಳುವ 2.20 ಎಕರೆ ಜಾಗವನ್ನು ಭದ್ರತೆಯ ಹಿತದೃಷ್ಟಿಯಿಂದ 200 ಅಧಿಕಾರಿಗಳು ಸೇರಿದಂತೆ 100 ಜನ ಕಾರ್ಮಿಕರು ಹಾಗೂ 15 ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸಮ್ಮುಖದಲ್ಲಿ ತೆರವುಗೊಳಿಸಿ ಪ್ರಾಧಿಕಾರದ ಸುಪರ್ದಿಗೆ ತೆಗೆದುಕೊಳ್ಳಲಾಯಿತು.

150 crore worth of land in HBR Layout has been seized by the Bengaluru Development Authority (BDA)

ಅನಧಿಕೃತ ಕಟ್ಟಡಗಳ ತೆರವು ಕಾರ್ಯಕ್ಕೂ ಮುನ್ನ ನೂತನವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಯುಕ್ತರ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡ ಎನ್.ಜಯರಾಂ ಅವರು ಪ್ರಾಧಿಕಾರದ ಕಾನೂನು ಕೋಶದ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಲಹೆಯನ್ನು ಪಡೆದು, ತೆರವು ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿ, ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲಾಗಿದೆ.

LEAVE A REPLY

Please enter your comment!
Please enter your name here