Home ಬೀದರ್ ಬೀದರ್‌ನಲ್ಲಿ ಕಲುಷಿತ ನೀರು ಸೇವಿಸಿ 6 ಮಕ್ಕಳು ಸೇರಿದಂತೆ 18 ಜನ ಅಸ್ವಸ್ಥ

ಬೀದರ್‌ನಲ್ಲಿ ಕಲುಷಿತ ನೀರು ಸೇವಿಸಿ 6 ಮಕ್ಕಳು ಸೇರಿದಂತೆ 18 ಜನ ಅಸ್ವಸ್ಥ

18
0
18 people including 6 children fall sick after drinking contaminated water in Bidar
18 people including 6 children fall sick after drinking contaminated water in Bidar

ಬೀದರ್:

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ. 18 ಜನರ ಪೈಕಿ 6 ಮಂದಿ ಮಕ್ಕಳು ಸೇರಿದ್ದು ಅವರನ್ನು ಔರಾದ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕುಡಿಯುವ ನೀರಿನ ಬಾವಿಗೆ ಚರಂಡಿ ನೀರು ಸೇರಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು ಅಧಿಕಾರಿಗಳ ತಂಡ ಗ್ರಾಮಕ್ಕೆ ದೌಡಾಯಿಸಿದ್ದಾರೆ.

ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದರು. ಇನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಕರಿಕ್ಯಾಳ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

LEAVE A REPLY

Please enter your comment!
Please enter your name here