Home Uncategorized 2ನೆ ಉಪಲೋಕಾಯುಕ್ತ ನೇಮಕ ಪ್ರಕ್ರಿಯೆ ಆರಂಭ: ಹೈಕೋರ್ಟ್‍ಗೆ ಸರಕಾರದ ಮಾಹಿತಿ

2ನೆ ಉಪಲೋಕಾಯುಕ್ತ ನೇಮಕ ಪ್ರಕ್ರಿಯೆ ಆರಂಭ: ಹೈಕೋರ್ಟ್‍ಗೆ ಸರಕಾರದ ಮಾಹಿತಿ

14
0

ಬೆಂಗಳೂರು: ಎರಡನೇ ಉಪಲೋಕಾಯುಕ್ತರ ನೇಮಕಕ್ಕೆ ಸಂಬಂಧಿಸಿದ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‍ಗೆ ತಿಳಿಸಿದೆ.

ಎರಡು ಉಪಲೋಕಾಯುಕ್ತ ಹುದ್ದೆಗಳ ಪೈಕಿ ಒಂದು ಹುದ್ದೆ ಭರ್ತಿಯಾಗಿರುವುದರಿಂದ ಅವರಿಗೆ ಕಾರ್ಯಭಾರ ಹೆಚ್ಚಿದೆ. ಹೀಗಾಗಿ, ಇನ್ನೊಂದು ಉಪಲೋಕಾಯುಕ್ತರ ಹುದ್ದೆಗೆ ನೇಮಕ ಮಾಡಬೇಕು ಎಂದು ಕೋರಿ ಹಿರಿಯ ವಕೀಲ ಎಸ್.ಬಸವರಾಜು ಎಂಬುವರು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ಪ್ರಸ್ತಾಪಿಸಿದರು. ವಿರೋಧ ಪಕ್ಷದ ನಾಯಕರ ನೇಮಕವಾಗದಿದ್ದರಿಂದ ಉಪಲೋಕಾಯುಕ್ತರ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿತ್ತು. ಈಗ ಪ್ರಕ್ರಿಯೆ ಆರಂಭವಾಗಿದೆ ಎಂದು ಸರಕಾರದ ವಕೀಲರು ಪೀಠಕ್ಕೆ ತಿಳಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠವು ಅರ್ಜಿಯ ವಿಚಾರಣೆಯನ್ನು ಫೆಬ್ರವರಿಗೆ ಮುಂದೂಡಿತು.

ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಎರಡು ಉಪ ಲೋಕಾಯುಕ್ತ ಹುದ್ದೆಗಳ ಪೈಕಿ ಒಂದರಲ್ಲಿ ನಿವೃತ್ತ ನ್ಯಾ. ಕೆ.ಎನ್.ಫಣೀಂದ್ರ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here