Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ತಂತ್ರಜ್ಞಾನ
  • ರಾಜ್ಯದಲ್ಲಿ ಈ ವರ್ಷ 200 ಸ್ಟಾರ್ಟ್ ಅಪ್ ಗಳಿಗೆ ತಲಾ ರೂ 50 ಲಕ್ಷದವರೆಗೆ ಮೂಲನಿಧಿ
  • ಬೆಂಗಳೂರು ನಗರ
  • ತಂತ್ರಜ್ಞಾನ

ರಾಜ್ಯದಲ್ಲಿ ಈ ವರ್ಷ 200 ಸ್ಟಾರ್ಟ್ ಅಪ್ ಗಳಿಗೆ ತಲಾ ರೂ 50 ಲಕ್ಷದವರೆಗೆ ಮೂಲನಿಧಿ

The Bengaluru Live January 16, 2022 2:00 PM 1 minute read
200 Startups to be provided with seed funding of Rs 50 Lakh each in Karnataka

ರಾಜ್ಯದಲ್ಲಿ ಈ ವರ್ಷ 200 ಸ್ಟಾರ್ಟ್ ಅಪ್ ಗಳಿಗೆ ತಲಾ ರೂ 50 ಲಕ್ಷದವರೆಗೆ ಮೂಲನಿಧಿ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ರಾಷ್ಟ್ರೀಯ ನವೋದ್ಯಮ ದಿನದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

ಬೆಂಗಳೂರು:

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ  ಹೆಚ್ಚುವರಿಯಾಗಿ 75 ನವೋದ್ಯಮಗಳಿಗೆ ಸೇರಿದಂತೆ ಈ ವರ್ಷ ರಾಜ್ಯದಲ್ಲಿ ಒಟ್ಟು 200 ನವೋದ್ಯಮಗಳಿಗೆ ಗರಿಷ್ಠ ತಲಾ 50 ಲಕ್ಷ ರೂ.ಗಳವರೆಗೆ ಮೂಲನಿಧಿ (ಸೀಡ್ ಫಂಡ್) ಕೊಡಲಾಗುವುದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ವಿಧಾನಸೌಧದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಪ್ರಪ್ರಥಮ `ರಾಷ್ಟ್ರೀಯ ನವೋದ್ಯಮ ದಿನ’ದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇದುವರೆಗೆ ಸರಿಸುಮಾರು 500 ಸ್ಟಾರ್ಟ್ ಅಪ್ ಗಳಿಗೆ ಅನುದಾನ ಕೊಡಲಾಗಿದ್ದು, ಮೂಲನಿಧಿ ಕೊಡುವ ಉಪಕ್ರಮ ಬೇರಾವ ರಾಜ್ಯದಲ್ಲೂ ಇಲ್ಲ ಎಂದರು.

ಪ್ರಸ್ತುತ ಹಣಕಾಸು ವರ್ಷದಲ್ಲಿ ಈವರೆಗೆ ರಾಜ್ಯದಲ್ಲಿ ಉದ್ದಿಮೆಗಳ ಸ್ಥಾಪನೆಗಾಗಿ 1.60 ಲಕ್ಷ ಕೋಟಿ ರೂ. ವಿದೇಶಿ ಬಂಡವಾಳ ಹರಿದುಬಂದಿದ್ದು,  ಒಟ್ಟಾರೆಯಾಗಿ ದೇಶದಲ್ಲಿ ಆಗಿರುವ ಹೂಡಿಕೆಯಲ್ಲಿ ಶೇ.50ಕ್ಕಿಂತ ಹೆಚ್ಚು ಭಾಗ ಕರ್ನಾಟಕದಲ್ಲೇ ಆಗಿದೆ. ದೇಶದಲ್ಲಿ ಒಟ್ಟು 57 ಸಾವಿರ ನವೋದ್ಯಮಗಳಿವೆ. ಈ ಪೈಕಿ 13 ಸಾವಿರಕ್ಕೂ ಹೆಚ್ಚು ಸ್ಟಾರ್ಟಪ್ ಗಳು ರಾಜ್ಯದಲ್ಲೇ ನೆಲೆ ಹೊಂದಿವೆ. ರಾಜ್ಯದಲ್ಲಿ ಅನುಷ್ಠಾನಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ರಾಜ್ಯದ ಈ ಮುಂಚೂಣಿ ಸ್ಥಾನವನ್ನು ಕಾಯ್ದುಕೊಳ್ಳಲು ಪೂರಕವಾಗಿರಲಿದೆ ಎಂದು ವಿವರಿಸಿದರು.

ದೇಶವು ‘ವಿಶ್ವಗುರು’ವಾಗಿ ಹಾಗೂ ಸೂಪರ್ ಪವರ್’ ಆಗಿ ಹೊರಹೊಮ್ಮುವಲ್ಲಿ ನವೋದ್ಯಮಗಳ ಪಾತ್ರ ನಿರ್ಣಾಯಕ ಎಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒತ್ತಿ ಹೇಳಿದ್ದಾರೆ. ಇದನ್ನು ಗಮನದಲ್ಲಿರಿಸಿಕೊಂಡು ರಾಜ್ಯದಲ್ಲಿ ಹಾರ್ಡ್‌ವೇರ್ ವಲಯವನ್ನೂ ದಕ್ಷವಾಗಿ ಬೆಳೆಸಲಾಗುವುದು. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ  ಸ್ಥಾಪಿಸಿರುವಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಅಂಡ್ ರೋಬೋಟಿಕ್ಸ್ ಟ್ರಾನ್ಸ್ಲೇಷನ್ ಪಾರ್ಕ್’ (ಆರ್ಟ್ ಪಾರ್ಕ್) ಈ ದಿಸೆಯಲ್ಲಿ ರಾಜ್ಯ ಸರ್ಕಾರದ ಬದ್ಧತೆಗೆ ಒಂದು ಉದಾಹರಣೆಯಷ್ಟೇ ಎಂದು ಅಭಿಪ್ರಾಯಪಟ್ಟರು.

200 Startups to be provided with seed funding of Rs 50 Lakh each in Karnataka

ರಾಜ್ಯದಲ್ಲಿ ಎಲೆಕ್ಟ್ರಾನಿಕ್ ಉದ್ದಿಮೆಗಳನ್ನು ಉತ್ತೇಜಿಸುವ ದೃಷ್ಟಿಯಿಂದ ಮುಂದಿನ ಐದು ವರ್ಷಗಳಲ್ಲಿ ಇಎಸ್ ಡಿಎಂ ನೀತಿಯಡಿ 5 ಸಾವಿರ ಕೋಟಿ ರೂ. ಸಬ್ಸಿಡಿ ಕೊಡಲಾಗುವುದು. ಇದರಲ್ಲಿ ಮೊದಲನೇ ವರ್ಷದಲ್ಲೇ 2 ಸಾವಿರ ಕೋಟಿ ರೂ. ನೆರವು ಒದಗಿಸಲಾಗಿದೆ ಎಂದು ತಿಳಿಸಿದರು.

ರಾಜ್ಯ ಸ್ಟಾರ್ಟಪ್ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ ಮಾತನಾಡಿ, `ನಾವು ಕೇವಲ ನಮಗಾಗಿ ಮಾತ್ರ ಉತ್ಪನ್ನಗಳನ್ನು ತಯಾರಿಸಿದರೆ ಸಾಲದು. ಚೀನಾದಂತೆ ಇಡೀ ಜಗತ್ತಿನ ಅಗತ್ಯಗಳನ್ನು ಗಮನಿಸಿ, ಮಾರುಕಟ್ಟೆಯನ್ನು ಹಿಗ್ಗಿಸಿಕೊಳ್ಳಬೇಕು. ಬೆಂಗಳೂರೇ ಈಗ ದೇಶದ ಆರ್ಥಿಕ ರಾಜಧಾನಿಯಾಗಿದೆ’ ಎಂದು ಸಲಹೆ ನೀಡಿದರು.

Also Read: 200 Startups to be provided with seed funding of Rs 50 Lakh each

ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಕಳೆದ 20 ವರ್ಷಗಳಲ್ಲಿ ನಮ್ಮ ಉದ್ಯಮ ವ್ಯವಸ್ಥೆ ಆಮೂಲಾಗ್ರವಾಗಿ ಬದಲಾಗಿದೆ. ಈಗ ಉದ್ಯಮಶೀಲ ವ್ಯಕ್ತಿಗಳಲ್ಲಿರುವ ಹೊಸ ಆಲೋಚನೆಗಳನ್ನು ತ್ವರಿತ ಗತಿಯಲ್ಲಿ ಗುರುತಿಸಲಾಗುತ್ತಿದ್ದು, ಅಗತ್ಯ ನೆರವು ಮತ್ತು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.

ಐಟಿ ಮತ್ತು ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್ ಮಾತನಾಡಿ, ರಾಜ್ಯದಲ್ಲಿ ನವೋದ್ಯಮಗಳಿಗೆ ಪ್ರಶಸ್ತವಾದ ಹಲವು ನೀತಿಗಳಿದ್ದು, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಮೂಲಕ ಮುಂದಿನ ಐದು ವರ್ಷಗಳ ಬೆಳವಣಿಗೆಗೆ ವೇದಿಕೆ ಸಿದ್ಧಪಡಿಸಲಾಗಿದೆ ಎಂದರು.

ರಾಜ್ಯದ 14 ನವೋದ್ಯಮಗಳಿಗೆ ಪ್ರಶಸ್ತಿ

ಅಖಿಲ ಭಾರತ ಮಟ್ಟದಲ್ಲಿ ಮೊದಲ ಬಾರಿಗೆ ನಡೆದ `ಸ್ಟಾರ್ಟ್ ಅಪ್ ಇಂಡಿಯಾ ನಾವೀನ್ಯತಾ ಸಪ್ತಾಹ’ದಲ್ಲಿ ವಿವಿಧ ವಲಯಗಳಲ್ಲಿ ರಾಜ್ಯದ 14 ನವೋದ್ಯಮಗಳು ಪ್ರಶಸ್ತಿ ಪುರಸ್ಕಾರಕ್ಕೆ ಪಾತ್ರವಾಗಿವೆ. ರಾಷ್ಟ್ರ ಮಟ್ಟದಲ್ಲಿ 46 ನವೋದ್ಯಮಗಳಿಗೆ ಪ್ರಶಸ್ತಿ ನೀಡಿದ್ದು, ಅವುಗಳಲ್ಲಿ ಸಿಂಹ ಪಾಲು (14) ಕರ್ನಾಟಕದ ಸಂಸ್ಥೆಗಳಿಗೇ ಸಿಕ್ಕಿದೆ ಎಂದು ಹೇಳಿದರು.

ನಫಾ ಇನ್ನೋವೇಷನ್ಸ್, ಉಂಬೋ ಇಡ್-ಟೆಕ್  (ಫಿನ್ಟೆಕ್), ಥಿಂಕರ್ ಬೆಲ್ ಲ್ಯಾಬ್ಸ್ (ಎಡುಟೆಕ್), ಸಿಂಪ್ಲೋಟೆಲ್ ಟೆಕ್ನಾಲಜೀಸ್ (ಪ್ರವಾಸ ಮತ್ತು ಆತಿಥ್ಯೋದ್ಯಮ), ಬ್ಲಿಂಕಿನ್ ಟೆಕ್ನಾಲಜೀಸ್ (ಆಗ್ಮೆಂಟೆಡ್ ರಿಯಾಲಿಟಿ), ಟ್ಯಾಗ್ ಬಾಕ್ಸ್ ಸೊಲ್ಯೂಷನ್ಸ್ (ಐಒಟಿ), ಶಾಪೋಸ್ ಸರ್ವೀಸಸ್, ಆತ್ರೇಯ ಗ್ಲೋಬಲ್ ಸೊಲ್ಯೂಷನ್ಸ್, ಝೆನ್ ಟ್ರಾನ್ ಲ್ಯಾಬ್ಸ್ ಪ್ರೈ.ಲಿ. (ಕೃಷಿ), ಲೀಡ್ ಸ್ಕ್ವೇರ್ಡ್ (ಗ್ರಾಹಕ ಸಂಬಂಧ), ಲಿಯೂಸಿನ್ ರಿಚ್ ಬಯೋ ಪ್ರೈ.ಲಿ. (ಜೀವವಿಜ್ಞಾನ), ಸ್ಟೆಲ್ ಆಪ್ಸ್ (ಪಶು ಸಂಗೋಪನೆ), 1ಬ್ರಿಡ್ಜ್ (ಲಾಜಿಸ್ಟಿಕ್ಸ್) ಮತ್ತು ಸ್ಟೆರಡಿಯನ್ ಸೆಮಿ (ಸಾರಿಗೆ ನಿರ್ವಹಣೆ)- ಇವು ಪುರಸ್ಕೃತ ಕಂಪನಿಗಳಾಗಿವೆ.

About the Author

The Bengaluru Live

Administrator

Visit Website View All Posts

Post navigation

Previous: ಕೋವಿಡ್ ಸೋಂಕಿನ ಭಯ: ಆಸ್ಪತ್ರೆ ಭೇಟಿಗಳನ್ನು ಮುಂದೂಡುವಂತೆ ಕರ್ನಾಟಕ ಆರೋಗ್ಯ ಇಲಾಖೆಯ ಮನವಿ
Next: ಅತಿಥಿ ಉಪನ್ಯಾಸಕರ ಸಮಸ್ಯೆಗೆ ರಾಜಕೀಯ ಬಣ್ಣ: ಸಚಿವರ ಬೇಸರ

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

The Bengaluru Live November 24, 2026 9:08 PM

Latest Post

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM
ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್ ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

November 24, 2026 9:08 PM
11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

November 24, 2026 8:23 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM
ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

The Bengaluru Live November 24, 2026 9:09 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
  • ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್
  • ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ
©Copyright 2025 The Bengaluru Live All rights reserved. | MoreNews by AF themes.