Home ಧಾರವಾಡ ರಾಜ್ಯದಲ್ಲಿ 2 ಸಾವಿರ ಕಿ.ಮೀ ಹೆದ್ದಾರಿ ನಿರ್ಮಾಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ರಾಜ್ಯದಲ್ಲಿ 2 ಸಾವಿರ ಕಿ.ಮೀ ಹೆದ್ದಾರಿ ನಿರ್ಮಾಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

46
0

ಧಾರವಾಡ:

ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 2000 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸಲು ತಾತ್ವಿಕ ಒಪ್ಪಿಗೆ ದೊರೆತಿದ್ದು, ಇದು ಸಂತಸ ತಂದಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಭೂ ಸಾರಿಗೆ ಮತ್ತು ಹೆದ್ದಾರಿಗಳ ಮಂತ್ರಾಲಯ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಇಂದು ವರ್ಚುವಲ್ ವೇದಿಕೆಯ (ಆನ್‍ಲೈನ್) ಮೂಲಕ ಆಯೋಜಿಸಿದ್ದ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕು ಸ್ಥಾಪನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರವು ದೇಶದ ವಿವಿಧ ರಾಜ್ಯ ಸರ್ಕಾರದ ಸಹಯೋಗದಲ್ಲಿ ಪ್ರತಿದಿನ ಸುಮಾರು 30 ಕಿ.ಮೀ.ಗೂ ಅಧಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗುತ್ತಿದೆ. ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ತಮ್ಮ ಇಲಾಖೆಯಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಹೆದ್ದಾರಿಗಳ ಅಭಿವೃದ್ಧಿ ಬಗ್ಗೆ ಅಪಾರ ಜ್ಞಾನ ಹೊಂದಿದ್ದಾರೆ. ಹೆದ್ದಾರಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ದೇಶದ ಭವಿಷ್ಯದ ದೂರದೃಷ್ಟಿಯೊಂದಿಗೆ ಅನುಷ್ಠಾನಗೊಳಿಸುತ್ತಿದ್ದಾರೆ ಎಂದರು.

ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ಜಂಕ್ಷನ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಬಹುತೇಕ ಒಪ್ಪಿಗೆ ನೀಡಿದ್ದು, ಶೀರ್ಘದಲ್ಲಿ ಕಾಮಗಾರಿ ಆರಂಭವಾಗಲಿದೆ. ಇದೊಂದು ಅಭಿನಂದನೀಯ ಕಾರ್ಯವಾಗಿದೆ ಎಂದರು. UNI

LEAVE A REPLY

Please enter your comment!
Please enter your name here