Home Uncategorized 2022-23ನೇ ಸಾಲಿನ ಪಂಪ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಡಾ. ಎಸ್ಆರ್ ರಾಮಸ್ವಾಮಿ ಆಯ್ಕೆ

2022-23ನೇ ಸಾಲಿನ ಪಂಪ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಡಾ. ಎಸ್ಆರ್ ರಾಮಸ್ವಾಮಿ ಆಯ್ಕೆ

22
0

ಪ್ರತಿ ವರ್ಷವೂ ರಾಜ್ಯ ಸರ್ಕಾರವು ಸಾಹಿತ್ಯ ಕ್ಷೇತ್ರದಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ ಶ್ರೇಷ್ಠರಿಗೆ ಪಂಪಾ ಪ್ರಶಸ್ತಿ ನೀಡುತ್ತಿದ್ದು 2022-23ನೇ ಸಾಲಿನ ಪಂಪ ಪ್ರಶಸ್ತಿಗೆ ಡಾ. ಎಸ್ಆರ್ ರಾಮಸ್ವಾಮಿಯನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು: ಪ್ರತಿ ವರ್ಷವೂ ರಾಜ್ಯ ಸರ್ಕಾರವು ಸಾಹಿತ್ಯ ಕ್ಷೇತ್ರದಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ ಶ್ರೇಷ್ಠರಿಗೆ ಪಂಪಾ ಪ್ರಶಸ್ತಿ ನೀಡುತ್ತಿದ್ದು 2022-23ನೇ ಸಾಲಿನ ಪಂಪ ಪ್ರಶಸ್ತಿಗೆ ಡಾ. ಎಸ್ಆರ್ ರಾಮಸ್ವಾಮಿಯನ್ನು ಆಯ್ಕೆ ಮಾಡಲಾಗಿದೆ. 

ಹಿರಿಯ ಪತ್ರಕರ್ತ, ಆರ್​ಎಸ್​ಎಸ್​ ವಿಚಾರವಾದಿಯಾಗಿರುವ ಡಾ. ಎಸ್ಆರ್ ರಾಮಸ್ವಾಮಿ ಅವರು 1979ರಿಂದ 4 ದಶಕಗಳಿಂದ ರಾಷ್ಟ್ರೋತ್ಥಾನ ಪರಿಷತ್ತು ಪ್ರಕಟಿಸುವ ಜನಪ್ರಿಯ ಮಾಸಿಕ ಉತ್ಥಾನದ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 

ನಾಲ್ಕು ದಶಕಗಳಿಂದ ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಡಾ.ಎಸ್.ಆರ್.ರಾಮಸ್ವಾಮಿ ಅವರು ಸಕ್ರಿಯರಾಗಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಸುಮಾರು 30 ಪ್ರಮುಖ ಪುಸ್ತಕಗಳನ್ನು ಬರೆದಿದ್ದಾರೆ. ಸಾಂಸ್ಕೃತಿಕ, ಸಾಹಿತ್ಯಿಕ, ರಾಷ್ಟ್ರೀಯತಾವಾದಿ ಮತ್ತು ಅಭಿವೃದ್ಧಿ ವಿಷಯಗಳ ಕುರಿತು 1,000ಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದಾರೆ.

ಪಂಪ ಪ್ರಶಸ್ತಿಯು ಫಲಕ, ಶಾಲು, ಹಾರ ಹಾಗೂ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡಿರುತ್ತದೆ.

LEAVE A REPLY

Please enter your comment!
Please enter your name here