ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡುವಿಕೆ ಹಿನ್ನೆಲೆಯಲ್ಲಿ ಇಂದಿನಿಂದ ಅಕ್ಟೋಬರ್ 15ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದ್ದು, ನಾಮ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ಹೊರಡಿಸಿದೆ. ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡುವಿಕೆ ಹಿನ್ನೆಲೆಯಲ್ಲಿ ಇಂದಿನಿಂದ ಅಕ್ಟೋಬರ್ 15ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದ್ದು, ನಾಮ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ಹೊರಡಿಸಿದೆ.
ಸೇವಾ ಸಿಂಧು ಪೋರ್ಟಲ್‌ನ ವೆಬ್‌ಸೈಟ್ ವಿಳಾಸ https://sevasindhu.karnataka.gov.in ಆಗಿದ್ದು, ಸಾಧಕರ ಹೆಸರನ್ನು ನಾಮನಿರ್ದೇಶನ ಮಾಡಬಹುದಾಗಿದೆ. 2023ನೇ ಸಾಲಿನ ಕನ್ನಡ ರಾಜೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು 39 ಸದಸ್ಯರ ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಚಿಸಿ ಆದೇಶಿಸಲಾಗಿದೆ.
ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ, ಸಾಹಿತಿಗಳಾದ ಪ್ರೊ. ಜಾಣಗೆರೆ ವೆಂಕಟರಾಮಯ್ಯ, ಹೆಚ್. ಎಲ್. ಪುಷ್ಪ, ವೀರಣ್ಣ ದಂಡ, ಮೂಡಾಕೂಡು ಚಿನ್ನಸ್ವಾಮಿ, ಅಲ್ಲಮಪ್ರಭು ಬೆಟ್ಟದೂರು, ಕಾ.ತಾ. ಚಿಕ್ಕಣ್ಣ, ವೈದ್ಯ ಡಾ. ಸಿ.ಆರ್. ಚಂದ್ರಶೇಖರ್, ಜಾನಪದ ಕಲಾವಿದ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ, ಕೃಷ್ಣಮೂರ್ತಿ ಹನೂರು, ಟಾಕಪ್ಪ ಕಣ್ಣೂರು, ಪಿಚ್ಚಳ್ಳಿ ಶ್ರೀನಿವಾಸ್ ಸೇರಿದಂತೆ ವಿವಿಧ ಕ್ಷೇತ್ರಗಳ 36 ಸಾಧಕರನ್ನು ಆಯ್ಕೆ ಸಮಿತಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ.