Home Uncategorized 2024 ಜನವರಿ ಹೊತ್ತಿಗೆ ಬೆಂಗಳೂರು-ಚೆನ್ನೈ ಎಕ್ಸ್'ಪ್ರೆಸ್ ವೇ ಲೋಕಾರ್ಪಣೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ

2024 ಜನವರಿ ಹೊತ್ತಿಗೆ ಬೆಂಗಳೂರು-ಚೆನ್ನೈ ಎಕ್ಸ್'ಪ್ರೆಸ್ ವೇ ಲೋಕಾರ್ಪಣೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ

4
0
bengaluru

2024ರ ಜನವರಿಯೊಳಗೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿಯನ್ನು ಪೂರ್ಣಗೊಳಿಸಿ, ಲೋಕಾರ್ಪಣೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಹೇಳಿದರು. ಬೆಂಗಳೂರು: 2024ರ ಜನವರಿಯೊಳಗೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿಯನ್ನು ಪೂರ್ಣಗೊಳಿಸಿ, ಲೋಕಾರ್ಪಣೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಹೇಳಿದರು.

8 ಪಥಗಳ ಈ ಎಕ್ಸ್‌ಪ್ರೆಸ್ ವೇ ಕಾಮಗಾರಿಯ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ, ಕೋಲಾರದ ವಡಗಾನಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗಡ್ಕರಿಯವರು ಮಾತನಾಡಿದರು.

Interacting with Media on the progress of Bengaluru – Chennai Expressway, Karnataka https://t.co/u5OXQnoZLo
— Nitin Gadkari (@nitin_gadkari) January 5, 2023

ಬೆಂಗಳೂರು- ಚೆನೈ ಹೈವೇ ಕರ್ನಾಟಕದಲ್ಲಿ 3 ಪ್ಯಾಕೇಜ್ ಇದ್ದು, ಈ ಪೂರ್ಣ ಎಕ್ಸ್‌ಪ್ರೆಸ್ ವೇಯನ್ನು ಸುಮಾರು 1700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಹಾದು ಹೋಗುವ ಹೆದ್ದಾರಿ ಉದ್ದ 71 ಕಿ.ಮೀ ಇದ್ದು, ಇದಕ್ಕಾಗಿ 5096 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ವಿವರಿಸಿದರು.

bengaluru

ಕರ್ನಾಟಕ ಭಾಗದಲ್ಲಿನ ಹೆದ್ದಾರಿಯ ಕಾಮಗಾರಿ ಪೈಕಿ ಈಗಾಗಲೇ ಶೇ.34ರಷ್ಟು ಪೂರ್ಣಗೊಂಡಿದೆ. ಈ ಎಕ್ಸ್‌ಪ್ರೆಸ್ ವೇ ಲೋಕಾರ್ಪಣೆಗೊಂಡ ಬಳಿಕ, ಬೆಂಗಳೂರಿನಿಂದ 2.15 ಗಂಟೆಯಲ್ಲಿ ಚೆನ್ನೈಗೆ ಹೋಗಬಹುದು. ಲಾಜಿಸ್ಟಿಕ್ ವೆಚ್ಚ ಉಳಿಸಲು ಇದರಿಂದ ಸಾಧ್ಯವಾಗಲಿದೆ. ದೇಶದಲ್ಲಿ ಸದ್ಯ ಲಾಜಿಸ್ಟಿಕ್ ವೆಚ್ಚ ಶೇ. 16ರಷ್ಟಿದೆ. ಹಾಗಾಗಿ, ಎಕ್ಸ್‌ಪ್ರೆಸ್ ವೇಯಿಂದ ಶೇ.4ರಷ್ಟು ವೆಚ್ಚವನ್ನು ತಗ್ಗಿಸಬಹುದಾಗಿದೆ ಎಂದು ತಿಳಿಸಿದರು.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯನ್ನು ಅಮೃತ ಮಹೋತ್ಸವ ಪಕ್ಷಿಗಳ ಗಾರ್ಡನ್ ಮಾಡಲಿದ್ದೇವೆ. ಜೊತೆಗೇ ಅಮೃತ್ ಸರೋವರ ಕೂಡ ನಿರ್ಮಾಣ ಮಾಡಲಾಗುವುದು ಎಂದರು.

A few more clicks from Bengaluru – Chennai Expressway inspection, with Karnataka PWD Minister Shri @CCPatilBJP Ji, Chikballapur MP Shri @BNBachegowda_MP Ji, and Kolar MP Shri @bjp_muniswamy Ji. #PragatiKaHighway #GatiShakti #BengaluruChennaiExpressway pic.twitter.com/1sEtUyZmcq
— Nitin Gadkari (@nitin_gadkari) January 5, 2023

ಬನ್ನೇರುಘಟ್ಟ ವಿಚಾರವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಜೊತೆಗೆ ಮಾತನಾಡುತ್ತೇನೆ, ಈಗಾಗಲೇ ಮುಂಬೈನಲ್ಲಿ ಅರಣ್ಯ ಅಂಡರ್ ಪಾಸ್ ಇದೆ. ಒಂದೊಮ್ಮೆ ಸಾಧ್ಯವಾದರೆ, ಕರ್ನಾಟಕದಲ್ಲೂ ಅದೇ ರೀತಿಯ ಅರಣ್ಯ ಅಂಡರ್ ಪಾಸ್ ಮಾಡಲು ಮುಂದಾಗಲಿದ್ದೇವೆ ಎಂದು ತಿಳಿಸಿದರು.

ನಮ್ಮ ಸರ್ಕಾರದಿಂದ ಹಲವಾರು‌ ಹಸಿರು ಹೆದ್ದಾರಿಗಳನ್ನು ನಿರ್ಮಾಣ ಮಾಡುತ್ತಿದ್ದೇವೆ. ಬೆಂಗಳೂರಿನ ಸಾಲಿಡ್ ವೇಸ್ಟ್ ಅನ್ನು ರಸ್ತೆಗೆ ಬಳಸಬಹುದಾ ಎಂಬ ಆಲೋಚನೆ ಇದೆ. ಮಿರೈ ಎಂಬ ಕಾರು ಗ್ರೀನ್ ಹೈಡ್ರೋಜನ್ ನಲ್ಲಿ ಸಂಚರಿಸುತ್ತೆ. ಆರ್ಗಾನಿಕ್ ವೇಸ್ಟ್, ಬಯೋಮಾಸ್‌ನಿಂದ ಗ್ರೀನ್ ಹೈಡ್ರೋಜನ್ ಉತ್ಪಾದಿಸಬಹುದು ಎಂದು ಹೇಳಿದರು.

ಹೊಸ ಎಕ್ಸ್‌ಪ್ರೆಸ್‌ ವೇ ಮಾರ್ಗದಲ್ಲಿ ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಿದ್ದೇವೆ. ಮಾರ್ಚ್ 2024ರಲ್ಲಿ ಬೆಂಗಳೂರು ಚೆನೈ ವಿಮಾನ‌ ಬಳಕೆ ಕಡಿಮೆ ಆಗುತ್ತೆ. ಜನರು ವಾಹನಗಳಿಗೆ ಹಾಕ್ತಿದ್ದ ಇಂಧನ ವೆಚ್ಚ ಉಳಿಯಲಿದೆ. ಜನಸಾಮಾನ್ಯರು ಕೂಡ ಎನ್’ಹೆಚ್ಎಐ ಇನ್ವಿಡ್ ಬಾಂಡ್‌ನಲ್ಲಿ‌ ಹಣ ಹೂಡಿಕೆ‌ ಮಾಡಲಿ. ನಾವು ತಿಂಗಳಿಗೆ ೮ ಪರ್ಸೆಂಟ್ ರಿಟರ್ನ್ ನೀಡುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ, ಬೆಂಗಳೂರು ನಗರದಲ್ಲಿ ಟ್ರಾಫಿಕ್ ಕಡಿಮೆ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ತಿಳಿಸಿದ ಅವರು, ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಮಾಡಲಿದ್ದೇವೆ ಎಂದು ಹೇಳಿದರು.

ಬೆಂಗಳೂರಿನ ಪೀಣ್ಯ ಫ್ಲೈ ಓವರ್ ವಿಚಾರ ಕುರಿತು ಮಾತನಾಡಿ, ಈಗಾಗಲೇ ಬಿಡ್ ಬಂದಿದ್ದು, ವ್ಯವಹಾರವನ್ನ ಪೂರ್ತಿ ಮಾಡಲಾಗುವುದು. ಸಮಸ್ಯೆಯನ್ನು ಆದಷ್ಟು ಬೇಗ ನಿವಾರಿಸಲಾಗುವುದು ಎಂದು ತಿಳಿಸಿದರು.

bengaluru

LEAVE A REPLY

Please enter your comment!
Please enter your name here