
24 new ministers List of Chief Minister Siddaramaiah's cabinet announced; swearing-in on Saturday morning
ಬೆಂಗಳೂರು:
ಸಂಪುಟ ವಿಸ್ತರಣೆ ಸಂಬಂಧ ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ತೀವ್ರ ಕಸರತ್ತು ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆಯ ಬಳಿಕ ಇಂದು ರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಶನಿವಾರ ಬೆಳಗ್ಗೆ ವಿಸ್ತರಣೆಯಾಗಲಿದ್ದು, ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ನಾಳೆ ಪ್ರಮಾಣವಚನ ಸ್ವೀಕರಿಸಲಿರುವ 24 ನೂತನ ಸಚಿವ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.
ನಾಳೆ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ 24 ಶಾಸಕರಿಗೂ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ನೂತನ ಸಚಿವರ ಪಟ್ಟಿ
ಎಚ್.ಕೆ.ಪಾಟೀಲ್
ಕೃಷ್ಣ ಭೈರೇಗೌಡ
ಚಲುವರಾಯಸ್ವಾಮಿ
ಕೆ ವೆಂಕಟೇಶ್
ಎಚ್.ಸಿ.ಮಹದೇವಪ್ಪ
ಈಶ್ವರ ಖಂಡ್ರೆ
ಕೆ.ಎನ್.ರಾಜಣ್ಣ
ದಿನೇಶ್ ಗುಂಡೂರಾವ್
ಶರಣಬಸಪ್ಪ ದರ್ಶನಾಪುರ
ಶಿವಾನಂದ ಪಾಟೀಲ್
ಆರ್.ಬಿ.ತಿಮ್ಮಾಪುರ
ಎಸ್.ಎಸ್.ಮಲ್ಲಿಕಾರ್ಜುನ,
ಶಿವರಾಜ ತಂಗಡಗಿ
ಡಾ.ಶರಣ ಪ್ರಕಾಶ್ ಪಾಟೀಲ್
ಮಂಕಾಳು ವೈದ್ಯ,
ಲಕ್ಷ್ಮೀ ಹೆಬ್ಬಾಳ್ಕರ್
ರಹೀಂ ಖಾನ್
ಡಿ.ಸುಧಾಕರ್
ಸಂತೋಷ್ ಲಾಡ್
ಬೋಸರಾಜು
ಬಿ.ಎಸ್.ಸುರೇಶ್
ಮಧು ಬಂಗಾರಪ್ಪ
ಎಂ.ಸಿ.ಸುಧಾಕರ್
ಬಿ.ನಾಗೇಂದ್ರ