ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಒಟ್ಟು 254 ಅಡುಗೆ ಅನಿಲ ಸಿಲಿಂಡರ್ ಗಳನ್ನು ವಶಪಡಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ ಅವರು ಈ ಕುರಿತು ಮಾಹಿತಿ ನೀಡಿದರು.
ನಗರದ ಬೆಂಗಳೂರು ಉತ್ತರ ತಾಲ್ಲೂಕಿನ ಚೋಕ್ಕಸಂದ್ರದ ವಿನಾಯಕ ಗ್ಯಾಸ್ ಏಜೆನ್ಸಿಯಲ್ಲಿ 45 ಅನಧಿಕೃತ ಅಡುಗೆ ಅನಿಲ ಸಿಲಿಂಡರ್ ಗಳನ್ನು ಹಾಗೂ ಯಲಹಂಕ ತಾಲ್ಲೂಕಿನ ಚಿಕ್ಕಜಾಲ ಹೋಬಳಿಯ ಅನ್ನಪೂರ್ಣ ಎಂಟರ್ ಪ್ರೈಸಸ್ ಮಳಿಗೆಯಲ್ಲಿ 209 ಗ್ಯಾಸ್ ಸಿಲಿಂಡರ್ ಗಳನ್ನು ಆಹಾರ ಇಲಾಖೆಯ ನಿರೀಕ್ಷಕರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಈ ಮಳಿಗೆಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
