ಬೆಂಗಳೂರು:
ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಪ್ರಾರಂಭಗೊಂಡ ಕೋವಿಡ್ ಲಸಿಕಾ ಕಾರ್ಯಕ್ರಮದಡಿ ಒಟ್ಟು ಐದು ಕೇಂದ್ರಗಳಲ್ಲಿ ಲಸಿಕೆ ವಿತರಣೆಯಾಗಿದ್ದು, ಒಟ್ಟು 259 ಜನ ಕೊರೋನಾ ಸೈನಿಕರಿಗೆ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್ ತಿಳಿಸಿದ್ದಾರೆ.
ಒಟ್ಟು 403 ಮಂದಿಗೆ ಲಸಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ ದಿನದ ಅಂತ್ಯಕ್ಕೆ 259 ಮಂದಿಗೆ ಇಲಾಖೆಯಿಂದ ಲಸಿಕೆಯನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ ಅವರು ಶೇ. 65 ರಷ್ಟು ಯಶಸ್ಸನ್ನು ಮೊದಲ ದಿನ ಸಾಧಿಸಲಾಗಿದೆ ಎಂದು ತಿಳಿಸಿದರು.
ಆನೇಕಲ್ ಸಾರ್ವಜನಿಕ ಆಸ್ಪತ್ರೆಯಲ್ಲಿ 52 ಜನರಿಗೆ, ಕೆ ಆರ್ ಪುರಂ ಸಾರ್ವಜನಿಕ ಆಸ್ಪತ್ರೆಯಲ್ಲಿ 81 ಜನರಿಗೆ, ಈಸ್ಟ್ ಪಾಯಿಂಟ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ 40 ಜನರಿಗೆ, ಕಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಸೇರಿದಂತೆ ನಿಮ್ಹಾನ್ಸ್ ನಲ್ಲಿ 56 ಮಂದಿಗೆ ಇಂದು ಲಸಿಕೆ ವಿತರಣೆ ನೀಡಲಾಗಿದೆ ಎಂದು ಅವರು ತಿಳಿಸಿದರು.