27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್ಶಿಪ್ ಲೋಗೋ ಜೊತೆ ಅಧಿಕಾರಿಗಳು. ಫೋಟೋ: ಪ್ರಿಯಾಂಕ್ ಖರ್ಗೆ ಎಕ್ಸ್
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಆತಿಥ್ಯದಲ್ಲಿ ನವೆಂಬರ್ 16ರಿಂದ 21ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ 27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್ಶಿಪ್ ಪಂದ್ಯಾವಳಿಯ ಲೋಗೋ ಬಿಡುಗಡೆಗೊಳಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ದೇಶದ 17 ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶ, ಆರು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಹಾಗೂ ಮೂರು ಕೇಂದ್ರ ಪೊಲೀಸ್ ಸಂಸ್ಥೆಗಳನ್ನು ಪ್ರತಿನಿಧಿಸುವ 180 ಹಿರಿಯ ಪೊಲೀಸ್ ಅಧಿಕಾರಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಖರ್ಗೆ ಅವರು ಎಕ್ಸ್ನಲ್ಲಿ ತಿಳಿಸಿದ್ದಾರೆ.
ನವೆಂಬರ್ 16ರಿಂದ 21ರವರೆಗೆ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಆತಿಥ್ಯದಲ್ಲಿ ಜರುಗುವ 27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್ಶಿಪ್ ಪಂದ್ಯಾವಳಿಯ ಲೋಗೋ ಬಿಡುಗಡೆಗೊಳಿಸಲಾಯಿತು.
— Priyank Kharge (@PriyankKharge) November 11, 2026
ಕೆಎಸ್ಎಲ್ಟಿಎ ಮತ್ತು ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಚಾಂಪಿಯನ್ಶಿಪ್ಗೆ ಕರ್ನಾಟಕ ಆತಿಥ್ಯ ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಅವರು ಹೇಳಿದ್ದಾರೆ.
