Karnataka High Court slams officials for deliberately filing false chargesheets in election cases: ಚುನಾವಣಾ ಪ್ರಕರಣಗಳಲ್ಲಿ ಉದ್ದೇಶಪೂರ್ವಕವಾಗಿ ತಪ್ಪಾದ ಆರೋಪಪಟ್ಟಿ ಸಲ್ಲಿಸುವ ಅಧಿಕಾರಿಗಳ ನಡೆಗೆ ಹೈಕೋರ್ಟ್ ತೀವ್ರ ತರಾಟೆ
ಬೆಂಗಳೂರು:
ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಗುರುವಾರ ತೆರವುಗೊಳಿಸಿದ್ದು, ಆದೇಶದಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಉಪಜಾತಿ, ಸಮುದಾಯ ಬುಡಕಟ್ಟುಗಳು ಸಲ್ಲಿಸುವ ವೈಯಕ್ತಿಕ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸದಂತೆ ತಡೆ ನೀಡಬೇಕೆಂದು ಡಿ.ಜಿ.ರಾಘವೇಂದ್ರ ಎಂಬುವರು ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಮೀಸಲಾತಿ ಹಂಚಿಕೆಗೆ ಸಂಬಂಧಿಸಿದಂತೆ ಪ್ರವರ್ಗ 2ಎ ಸೇರ್ಪಡೆ ಮಾಡುವ ಅಥವಾ 2ಸಿ, 2ಡಿ ಪ್ರವರ್ಗ ಸೃಷ್ಟಿಸಲು ಸರ್ಕಾರ ಕೈಗೊಂಡಿದ್ದ ನಿರ್ಣಯದ ಮುಂದಿನ ಪ್ರಕ್ರಿಯೆಗಳಿಗೆ ತಾತ್ಕಾಲಿಕ ತಡೆ ಬಿದ್ದಿತ್ತು.
ಇದೀಗ 2ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್ಗೆ ಕೇಂದ್ರ ಸರ್ಕಾರದ ಸಾಲಿಸಿಟರ್ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮಧ್ಯಂತರ ಆದೇಶವನ್ನು ರದ್ದುಗೊಳಿಸಿದೆ. ಹೀಗಾಗಿ ಪಂಚಮಸಾಲಿ ಸಮುದಾಯಕ್ಕೆ 2ಸಿ, 2ಡಿ ಮೀಸಲಾತಿ ನೀಡಲು ಯಾವುದೇ ಅಡ್ಡಿ ಇಲ್ಲದಂತಾಗಿದೆ.
