ಬೆಂಗಳೂರು:
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದಡಿ ರಾಜ್ಯದ ಬಡ ಕುಟುಂಬಗಳಿಗೆ ನಿರ್ಮಿಸಿಕೊಡುತ್ತಿರುವ ಮನೆಗಳ ಪೈಕಿ 36 ಸಾವಿರ ಮನೆ ಮುಂದಿನ ತಿಂಗಳು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ (Zameer Ahmed Khan) ತಿಳಿಸಿದ್ದಾರೆ.
ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಆಯೋಜಿಸಿದ್ದ ʼಮನೆ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ‘ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2.32 ಲಕ್ಷ ಮನೆ ಗಳನ್ನು ಈ ವರ್ಷ ದ ಅಂತ್ಯದೊಳಗೆ ಪೂರ್ಣ ಗೊಳಿಸಿ ಹಂಚಿಕೆ ಮಾಡುವ ಗುರಿ ಹೊಂದಿದ್ದು, ಮೊದಲ ಹಂತದಲ್ಲಿ 36 ಸಾವಿರ ಮನೆ ಫೆಬ್ರವರಿ ತಿಂಗಳಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ದಿಂದ 2013 ರಿಂದ ಇದುವರೆಗೆ 2.32 ಲಕ್ಷ ಮನೆ ನಿರ್ಮಿಸಲಾಗುತ್ತಿದೆ. ಬಡ ಕುಟುಂಬದ ಫಲಾನುಭವಿಗಳ ಪಾಲಿನ ವಂತಿಗೆ 8200 ಸರ್ಕಾರ ವೇ ಭರಿಸಲಿದ್ದು, ಮೊದಲ ಕಂತು 500 ಕೋಟಿ ರೂ. ಬಿಡುಗಡೆ ಯಾಗಿದೆ. ಮನೆಗಳ ಕಾಮಗಾರಿ ಶೀಘ್ರ ಪೂರ್ಣ ಗೊಳಿಸಿ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.