ಬೆಳಗಾವಿ, ಡಿ.10: ರಾಜ್ಯದಲ್ಲಿ ಒಟ್ಟು 37,48,700 ವಸತಿ ರಹಿತರು ಇದ್ದಾರೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ. ಜಡ್. ಜಮೀರ್ ಅಹಮದ್ ಖಾನ್ ವಿಧಾನ ಪರಿಷತ್ತಿಗೆ ತಿಳಿಸಿದರು.
ಸದಸ್ಯ ಶಿವಕುಮಾರ್ ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2018ರಲ್ಲಿ ಗ್ರಾಮೀಣ ವಸತಿ/ನಿವೇಶನ ರಹಿತರ ಸಮೀಕ್ಷೆ ಮತ್ತು 2017ರಲ್ಲಿ ನಗರ ವಸತಿ/ನಿವೇಶನ ರಹಿತರ ಸಮೀಕ್ಷೆ (PMAY–Urban) ನಡೆಸಲಾಗಿದೆ ಎಂದು ಹೇಳಿದರು.
ಈ ಸಮೀಕ್ಷೆಗಳಲ್ಲಿ ರಾಜ್ಯದಲ್ಲಿ ಒಟ್ಟು 37,48,766 ವಸತಿ ರಹಿತರು ಗುರುತಾಗಿದ್ದು,
• 17,31,633 ನಿವೇಶನ ರಹಿತರು
• 20,17,133 ಮನೆ ರಹಿತರು ಎಂದು ಮಾಹಿತಿ ನೀಡಿದರು.
2024–25 ನೇ ಸಾಲಿನಲ್ಲಿ ವಿವಿಧ ವಸತಿ ಯೋಜನೆಗಳಡಿ 7,38,881 ಮನೆಗಳ ಗುರಿ ನಿಗದಿ ಮಾಡಲಾಗಿದ್ದು, ಇದರಲ್ಲಿ
• 3,27,747 ಮನೆಗಳು ಅನುಮೋದನೆಗೊಂಡಿವೆ
• 4,11,134 ಮನೆಗಳು ಅನುಮೋದನೆಗೆ ಇನ್ನೂ ಬಾಕಿ ಎಂದರು.
ರಾಜ್ಯದಲ್ಲಿ ಮನೆ ನಿರ್ಮಾಣಕ್ಕೆ ನೀಡುತ್ತಿರುವ ವಸತಿ ಅನುದಾನವನ್ನು ಹೆಚ್ಚಿಸುವ ಕುರಿತು ಚಿಂತನೆ ನಡೆಯುತ್ತಿದೆ.
• ಪರಿಶಿಷ್ಟ ಜಾತಿ/ಪಂಗಡದವರಿಗೆ ₹4 ಲಕ್ಷ
• ಸಾಮಾನ್ಯ ವರ್ಗದವರಿಗೆ ₹3.5 ಲಕ್ಷ
ಮಾಡುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.
