ನವ ದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಇಂದು ಸೋಮವಾರ ಬೆಳಿಗ್ಗೆ 5:36 ಕ್ಕೆ 4.0 ತೀವ್ರತೆಯ ಭೂಕಂಪನ ಸಂಭವಿಸಿದೆ. ದಿಲ್ಲಿ ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳಲ್ಲಿ ಬಲವಾದ ಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ.
ದಿಲ್ಲಿಯನ್ನು ಕೇಂದ್ರಬಿಂದುವಾಗಿಟ್ಟುಕೊಂಡು ಸಂಭವಿಸಿದ ಭೂಕಂಪದ ಆಳ ಕೇವಲ 5 ಕಿ.ಮೀ. ಆಗಿತ್ತು. ಉತ್ತರ ಭಾರತದಾದ್ಯಂತ ಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ತಿಳಿಸಿದೆ.
ಕಳೆದ ತಿಂಗಳು, ಜನವರಿ 23 ರಂದು, ಚೀನಾದ ಕ್ಸಿನ್‌ಜಿಯಾಂಗ್‌ನಲ್ಲಿ 80 ಕಿಲೋಮೀಟರ್ ಆಳದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದಿಲ್ಲಿ-ಎನ್‌ಸಿಆರ್ ನಾದ್ಯಂತ ಬಲವಾದ ಕಂಪನದ ಅನುಭವವಾಗಿತ್ತು. ಅದಕ್ಕೂ ಎರಡು ವಾರಗಳ ಮೊದಲು, ಜನವರಿ 11 ರಂದು ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ ಮತ್ತು ಎನ್‌ಸಿಆರ್ ನಲ್ಲಿ ಲಘು ಕಂಪನಗಳ ಅನುಭವವಾಗಿತ್ತು