ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ 4-5 ದಿನಗಳಲ್ಲಿ ಪ್ರಾರಂಭವಾಗಲಿದೆ ಮತ್ತು ಇದಕ್ಕಾಗಿ ಅರ್ಜಿಯನ್ನು ಸಿದ್ಧಪಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ 4-5 ದಿನಗಳಲ್ಲಿ ಪ್ರಾರಂಭವಾಗಲಿದೆ ಮತ್ತು ಇದಕ್ಕಾಗಿ ಅರ್ಜಿಯನ್ನು ಸಿದ್ಧಪಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಶುಕ್ರವಾರ ಪರಿಷತ್ತಿನಲ್ಲಿ ಎಂಎಲ್‌ಸಿ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವೆ, ಯೋಜನೆಗೆ ನೋಂದಣಿ ತೆರೆಯಲು ಶೀಘ್ರದಲ್ಲೇ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಮತ್ತು ಸರ್ಕಾರವು ಆಗಸ್ಟ್ 16 ಅಥವಾ 17 ರಂದು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ 2,000 ರೂ. ಜಮೆ ಮಾಡಲಿದೆ. ‘ಗೃಹ ಲಕ್ಷ್ಮಿ ಯೋಜನೆ ಬಗ್ಗೆ ಮಾಹಿತಿ ನೀಡಲು ನಾವು ತೆರೆದಿರುವ ಸಹಾಯವಾಣಿಯ ಮೂಲಕ ಹೆಚ್ಚಿನ ಸಂಖ್ಯೆಯ ಕರೆಗಳು ಬರುತ್ತಿದ್ದು, ಜನರು ವಿಚಾರಿಸುತ್ತಿದ್ದಾರೆ’ ಎಂದು ಅವರು ಹೇಳಿದರು.
ಇದಲ್ಲದೆ, ಈ ಯೋಜನೆಗೆ ವಾರ್ಷಿಕ 30,000 ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ಅಂದಾಜಿಸಲಾಗಿದ್ದು, ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 17,500 ಕೋಟಿ ಮೀಸಲಿಡಲಾಗಿದೆ ಎಂದರು.
ಇದನ್ನೂ ಓದಿ: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಮುಂದೂಡಿಕೆ: ಇನ್ನೂ 4-5 ದಿನ ವಿಳಂಬ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಹೇಮಲತಾ ನಾಯಕ್ ಅವರು ಈ ಯೋಜನೆಯು ಕುಟುಂಬಗಳಲ್ಲಿ ಜಗಳಕ್ಕೆ ಕಾರಣವಾಗುವ ಬಗ್ಗೆ ಕಳವಳ ವ್ಯಕ್ತಪಡಿಸಿದಾಗ, ಈ ಯೋಜನೆಯು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುತ್ತದೆ ಎಂದು ಸಚಿವರು ಸಮರ್ಥಿಸಿಕೊಂಡರು.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಯಿಂದ ಕರ್ನಾಟಕದ 1.30 ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದರು.