ಬೆಂಗಳೂರು: ಗುತ್ತಿಗೆ ಕಾಮಗಾರಿಗಳ ಅವ್ಯವಹಾರ ಮತ್ತು ನಾರಾಯಣಪುರ ಅಣೆಕಟ್ಟು ಆಧುನೀಕರಣ ಅಂದಾಜು ಪಟ್ಟಿಯ ಅಕ್ರಮಗಳ ಕುರಿತಾದ ಪ್ರತ್ಯೇಕ ತನಿಖಾ ವರದಿಗಳನ್ನು ನ್ಯಾ.ಎಚ್. ಎನ್.ನಾಗಮೋಹನದಾಸ್ ವಿಚಾರಣಾ ಆಯೋಗವು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.
ರಾಜ್ಯ ಗುತ್ತಿಗೆದಾರರ ಸಂಘವು ಸರಕಾರದ ಟೆಂಡರ್ ಕಾಮಗಾರಿಗಳಲ್ಲಿ ಶೇ.40ಕ್ಕಿಂತ ಹೆಚ್ಚಿನ ಕಮಿಷನ್ ಚಾಲ್ತಿಯಲ್ಲಿದೆ ಎಂದು ಆರೋಪಿಸಿ ದೂರು ಸಲ್ಲಿಸಲಾಗಿತ್ತು. ಈ ಸಂಬಂಧ ನ್ಯಾ.ಎಚ್.ಎನ್.ನಾಗಮೋಹನದಾಸ್ ವಿಚಾರಣಾ ಆಯೋಗವು ಈ ಎಲ್ಲಾ ಆರೋಪಗಳ ಸತ್ಯಾಸತ್ಯತೆಯ ಬಗ್ಗೆ ಅಧ್ಯಯನ ಮಾಡಿ ತನಿಖೆ ನಡೆಸಿ ವರದಿಯನ್ನು ನೀಡಿದೆ.