Home ಆರೋಗ್ಯ ಮಂಜುಶ್ರೀ ಕಾಲೇಜ್ ಆಫ್ ನರ್ಸಿಂಗ್ ನ 40 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಮಂಜುಶ್ರೀ ಕಾಲೇಜ್ ಆಫ್ ನರ್ಸಿಂಗ್ ನ 40 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

213
0

ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಸ್ಥಳ ತಪಾಸಣೆ

ಬೆಂಗಳೂರು:

ನಗರದ ಕಾವಲು ಬೈಲಸಂದ್ರ ಮಂಜುಶ್ರೀ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ಒಟ್ಟು 210 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಜನವರಿ 25 ರಂದು ನರ್ಸಿಂಗ್ ಕಾಲೇಜು ಪ್ರಾರಂಭವಾಗಿದೆ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಹುತೇಕ ವಿದ್ಯಾರ್ಥಿಗಳು ಕೇರಳದ ಮೂಲದವರಾಗಿದ್ದು, ಮೊದಲಿಗೆ ಇಬ್ಬರಿಗೆ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಇಬ್ಬರಿಗೂ ಕೋವಿಡ್ ಪಾಸಿಟಿವ್ ಬಂದಿದೆ. ಆ ಬಳಿಕ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಿದ ವೇಳೆ 40 ಮಂದಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಎಲ್ಲರಿಗೂ Asymptomatic ಇರುವುದರಿಂದ ಕಾಲೇಜು ಬಳಿ ಇರುವ ಪಿಜಿಯಲ್ಲಿ ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಆಯುಕ್ತರು ಮಂಜುನಾಥ್ ಪ್ರಸಾದ್ ರವರು ಹೇಳಿದರು.

ಪಾಲಿಕೆ ಕಾವಲು ಭೈರಸಂದ್ರ ವ್ಯಾಪ್ತಿಯ ಮಂಜುಶ್ರೀ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಕೇರಳದ ವಿದ್ಯಾರ್ಥಿಗಳು ಕಾಲೇಜಿಗೆ ಹಿಂತಿರುಗಿದ್ದು, ಅವರಿಗೆ ಕೋವಿಡ್ ಪರೀಕ್ಷೆ ಮಾಡಿದಾಗ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬಂದಿವೆ. ಈ ಸಂಬಂಧ ಇಂದು ಆಯುಕ್ತರು ನರ್ಸಿಂಗ್ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು, ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವವರಲ್ಲಿ 40 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಉಳಿದ 170 ವಿದ್ಯಾರ್ಥಿಗಳನ್ನು ಹಾಸ್ಟೆಲ್ ನಲ್ಲಿ ಗೃಹಬಂಧನ ಮಾಡಲಾಗಿದ್ದು, 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿರಬೇಕು. ಯಾರು ಕೂಡಾ ಆಚೆ ಬರಬಾರದು ಹಾಗೂ ವಿದ್ಯಾರ್ಥಿಗಳಿಗೆ ಅವಶ್ಯಕವಾದುದ್ದನ್ನು ಹಾಸ್ಟೆಲ್ ಗೆ ಪೂರೈಸಬೇಕೆಂದು ಕಾಲೇಜು ಮುಖ್ಯಸ್ಥರಿಗೆ ಸ್ಪಷ್ಟ ಆದೇಶವನ್ನು ನೀಡಲಾಗಿದೆ‌. ಜೊತೆಗೆ ಕೋವಿಡ್ ಸೋಂಕು ದೃಢಪಟ್ಟವರಿಗೆ ಏನಾದರು ಸಮಸ್ಯೆ ಆದರೆ ಕೂಡಲೆ ಆಸ್ಪತ್ರೆ ದಾಖಲಿಸಲು ಅಧಿಕಾರಿಗಳು ಕ್ರಮವಹಿಸಲಿದ್ದಾರೆ ಎಂದರು.

BBMP commissioner Manjushree College of Nursing 3

ಈ ಘಟನೆಯಿಂದ ಪಾಲಿಕೆಯು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸೋಂಕು ದೃಢಪಟ್ಟಿರುವ 40 ಮಂದಿಯ ಸ್ಯಾಂಪಲ್ ಅನ್ನು ನಿಮಾನ್ಸ್ ಆಸ್ಪತ್ರೆಗೆ ಕಳುಹಿಸಿ ಪುನಃ ಪರೀಕ್ಷೆ ಮಾಡಿಸಲಾಗುವುದು. ಈ ಪೈಕಿ ಆಸ್ಪತ್ರೆ ಮುಖ್ಯಸ್ಥರ ಜೊತೆ ಈಗಾಗಲೇ ಚರ್ಚಿಸಿ ಸ್ಯಾಂಪಲ್‌ಗಳನ್ನು ಇಂದು ನಿಮಾನ್ಸ್ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ನಗರದಲ್ಲಿರುವ ಬಹುತೇಕ ನರ್ಸಿಂಗ್ ಕಾಲೇಜುಗಳಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳೇ ಇದ್ದಾರೆ. ಈಗಲೂ ಸಹ ಕೇರಳದಲ್ಲಿ ನಿತ್ಯ 5 ರಿಂದ 6 ಸಾವಿರ ಕೋವಿಡ್ ಕೇಸ್ ಗಳು ಬರುತ್ತಿವೆ. ವಾರದ ರಜೆ ದಿನಗಳಲ್ಲಿ ವಿದ್ಯಾರ್ಥಿಗಳು ಊರಿಗೆ ತೆರಳುತ್ತಿದ್ದಾರೆ. ಈ ಸಂಬಂಧ ನಗರದಲ್ಲಿ ಎಲ್ಲಾ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ನರ್ಸಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಯಾರು ವ್ಯಾಕ್ಸಿನೇಷನ್ ಮಾಡಿಸಿಕೊಂಡಿಲ್ಲ. ಅವರಿಗೆಲ್ಲಾ ವ್ಯಾಕ್ಸಿನೇಷನ್ ಮಾಡಲು ಕೂಡಾ ಸೂಚನೆ ನೀಡಲಾಗಿದೆ ಎಂದು ಹೇಳಿದರು.

BBMP commissioner Manjushree College of Nursing 4

ಕೇಂದ್ರ ಸರ್ಕಾರದ ಆದೇಶದಂತೆ ಕೇರಳದಿಂದ ಬರುವವರಿಗೆ ಯಾವುದೇ ನಿರ್ಬಂಧವಿಲ್ಲ. ಕೇರಳದಿಂದ ಬರುವ ವ್ಯಕ್ತಿ/ವಿದ್ಯಾರ್ಥಿ ನಗರಕ್ಕೆ ಬಂದರೆ ಅವರು 72 ಗಂಟೆಗಳ ಒಳಗಡೆ ಮಾಡಿರುವ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿ ಇದ್ದರೆ ಮಾತ್ರ ಸಂಸ್ಥೆ/ಕಾಲೇಜಿಗೆ ಸೇರಿಕೊಳ್ಳಬೇಕು‌. ಒಂದು ವೇಳೆ ಪರೀಕ್ಷೆ ಮಾಡಿಸಿಕೊಂಡು ಬರದಿದ್ದರೆ ಅವರು 14 ಗೃಹಬಂಧನ ದಲ್ಲಿದ್ದು, ನಂತರ ಆರ್.ಟಿ.ಪಿ.ಸಿ ಆರ್ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ಬಂದರೆ ಮಾತ್ರ ಹೊರಗಡೆ ಬರಲು ಅನುಮತಿ ನೀಡಬೇಕು. ಯಾರಾದರು ನಿಯಮ ಉಲ್ಲಂಘಿಸಿದರೆ ಸಂಬಂಧಪಟ್ಟ ಸಂಸ್ಥೆಯ ಮುಖ್ಯಸ್ಥರ ಮೇಲೆ ಕಠಣಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ವೇಳೆ ವಿಶೇಷ ಆಯುಕ್ತರು (ಆರೋಗ್ಯ) ರಾಜೇಂದ್ರ ಚೋಳನ್, ಪೂರ್ವ ವಲಯ ಜಂಟಿ ಆಯುಕ್ತರು ಪಲ್ಲವಿ, ಪೂರ್ವ ವಲಯ ಆರೋಗ್ಯಾಧಿಕಾರಿ ಸಿದ್ದಪ್ಪಾಜಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here