
42 soldiers fell sick after eating camp food in Karnataka
ಹಾಸನ :
ಕ್ಯಾಂಪ್ ನಲ್ಲಿ ಮಧ್ಯಾಹ್ನದ ಊಟ ಸೇವಿಸಿದ ಬಳಿಕ 42 ಸೈನಿಕರು ಅಸ್ವಸ್ಥಗೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ.
ಸೈನಿಕರು ಕುಡುಗರಹಳ್ಳಿಯ ಕ್ಯಾಂಪ್ ನಲ್ಲಿ ಚಾಲನಾ ತರಬೇತಿಗೆ ಬಂದಿದ್ದರು. ಇಂದು ಮಧ್ಯಾಹ್ನ ಕ್ಯಾಂಪ್‌ನಲ್ಲಿ ತಯಾರಿಸಿದ್ದ ಊಟ ಸೇವಿಸಿದ್ದರು, ಬಳಿಕ 35 ಸೈನಿಕರು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅಸ್ವಸ್ಥರನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ.
ಮಾಹಿತಿ ತಿಳಿದ ಕೂಡಲೇ ಶಾಸಕ ಸಿಮೆಂಟ್ ಮಂಜು ಅವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವತ್ತಿರುವ ಸೈನಿಕರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ಕೊಟ್ಟಿದ್ದಾರೆ. ಫುಡ್ ಪಾಯ್ಸನ್ ನಿಂದ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ.