Home Uncategorized 454 ಕೋಟಿ ರೂ. ವೆಚ್ಚದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು

454 ಕೋಟಿ ರೂ. ವೆಚ್ಚದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು

28
0
Advertisement
bengaluru

ನೂತನ ಜಿಲ್ಲೆ ವಿಜಯನಗರದಲ್ಲಿ 454 ಕೋಟಿ ರೂ. ವೆಚ್ಚದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.  ಬೆಂಗಳೂರು: ನೂತನ ಜಿಲ್ಲೆ ವಿಜಯನಗರದಲ್ಲಿ 454 ಕೋಟಿ ರೂ. ವೆಚ್ಚದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. 

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು, 454 ಕೋಟಿ ರೂ. ವೆಚ್ಚದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ ನೀಡಿದೆ ಎಂದರು.

ಇದನ್ನು ಓದಿ: ಸದ್ಯದಲ್ಲಿಯೇ ಹಂಪಿ ಮತ್ತು ಮೈಸೂರು ಪ್ರವಾಸೋದ್ಯಮ ಸರ್ಕ್ಯುಟ್: ಸಿಎಂ ಬೊಮ್ಮಾಯಿ

ಮಾರ್ಗಸೂಚಿ ದರದಲ್ಲಿ ಕಾರ್ಖಾನೆಗೆ 82 ಎಕರೆ ಜಮೀನು ಮಂಜೂರು ಮಾಡಲಾಗುವುದು. ಕಾರ್ಖಾನೆ ಸ್ಥಾಪನೆಯಿಂದ 2 ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದು ಎಂದು ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.

bengaluru bengaluru

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಫ್ತು ಘಟಕ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಇನ್‌ವೆಸ್ಟ್ ಕರ್ನಾಟಕ 2022 ಅನ್ನು ಆಯೋಜಿಸುವ ಸಲುವಾಗಿ ಇವೆಂಟ್‌ ಮ್ಯಾನೇಜ್‌ಮೆಂಟ್ಸ್‌ ಸಹಭಾಗಿಗಳನ್ನು ನೇಮಕ ಮಾಡಿಕೊಳ್ಳಲು 08.09.2022 ರಂದು ಹೊರಡಿಸಲಾದ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ಪಡೆಯಲಾಗಿದೆ. 74.99 ರೂ ಕೋಟಿಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಗಣಿಭಾದಿತ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಅಧಿಕಾರವನ್ನು ಕರ್ನಾಟಕ ಗಣಿ ಪರಿಸರ ಪುನಶ್ವೇತನ ನಿಗಮಕ್ಕೆ ನೀಡಲು ಸಮ್ಮತಿಸಲಾಗಿದೆ ಎಂದರು.

ಗಿಣಿಗೇರಾ-ರಾಯಚೂರು ರೈಲ್ವೆ ಮಾರ್ಗಕ್ಕೆ ರಾಜ್ಯದ ಪಾಲಿನ ಹಣ ಬಿಡುಗಡೆ, ಗಿಣಿಗೇರಾ-ರಾಯಚೂರು, ತುಮಕೂರು-ರಾಯದುರ್ಗ, ಬಾಗಲಕೋಟೆ-ಕುಡಚಿ ಮತ್ತು ಚಿಕ್ಕಮಗಳೂರು-ಬೇಲೂರು ನೂತನ ರೈಲು ಮಾರ್ಗಗಳ ಯೋಜನೆಗಳ ಪರಿಷ್ಕೃತ ಅಂದಾಜುಗಳಿಂದ ಹೆಚ್ಚಾಗಿರುವ ರಾಜ್ಯದ ಪಾಲಿನ ಮೊತ್ತ 964.41 ಕೋಟಿ ರೂ. ಗಳಿಗೆ ಅನುಮೋದನೆ ಪಡೆಯಲಾಗಿದೆ ಎಂದು ಮಾಧುಸ್ವಾಮಿ ಹೇಳಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ಶೇಕಡಾ 17 ರಷ್ಟು ವೇತನ ಹೆಚ್ಚಳ ಮಾಡಿರುವುದರಿಂದ ವಾರ್ಷಿಕವಾಗಿ ಸರ್ಕಾರದ ಬೊಕ್ಕಸಕ್ಕೆ 7,246.85 ಕೋಟಿ ರೂ. ವೆಚ್ಚ ತಗಲುತ್ತದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.


bengaluru

LEAVE A REPLY

Please enter your comment!
Please enter your name here