Home ಬೆಂಗಳೂರು ನಗರ Bengaluru: ಬೆಂಗಳೂರು ವೈದ್ಯಕೀಯ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ: ಕಾಲರಾ ಶಂಕೆ!

Bengaluru: ಬೆಂಗಳೂರು ವೈದ್ಯಕೀಯ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ: ಕಾಲರಾ ಶಂಕೆ!

23
0
Bangalore Medical College

ಬೆಂಗಳೂರು: ಬೆಂಗಳೂರು ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಲ್ಲೇಶ್ವರದ ಖಾಸಗಿ ಪಿಜಿಯಲ್ಲಿ ಯುವತಿಗೆ ಕಾಲರಾ ಇಲ್ಲದಿರುವುದು ದೃಢಪಟ್ಟಿದೆ. ಇದೇ ವೇಳೆ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರು ಅತಿಸಾರ ಬೇಧಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವುದು ಆತಂಕ ಮೂಡಿಸಿದೆ.

ತೀವ್ರ ಬೇಧಿ, ವಾಂತಿ ಮತ್ತು ನಿರ್ಜಲೀಕರಣ ಸಮಸ್ಯೆಯಿಂದ 47 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿದ್ದು, ಇವರಲ್ಲಿ 28 ಮಂದಿ ಟ್ರಾಮಾ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಐವರಿಗೆ ಹೆಚ್​​ ಬ್ಲಾಕ್ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.

ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ಎಲ್ಲ ವಿದ್ಯಾರ್ಥಿನಿಯರ ಆರೋಗ್ಯ ಉತ್ತಮವಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥಗೊಳ್ಳಲು ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ

ಹೆಚ್ಚು ತಾಪಮಾನ ನಡುವೆ ಬೆಂಗಳೂರಿನಲ್ಲಿ ಕಾಲರಾ ಭೀತಿ ಶುರುವಾಗಿದೆ. ಇದರ ಮಧ್ಯೆ ಏಕಾಏಕಿ ಬೆಂಗಳೂರು ಮೆಡಿಕಲ್‌ ಕಾಲೇಜಿನ ಹಾಸ್ಟೆಲ್​ ವಿದ್ಯಾರ್ಥಿನಿಯರು ಏಕಾಏಕಿ ವಾಂತಿ-ಭೇದಿಯಿಂದಾಗಿ ಅಸ್ವಸ್ಥಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲರಾ ಶಂಕೆ ವ್ಯಕ್ತವಾಗಿದೆ. ಇದರಿಂದ ಆರೋಗ್ಯ ಇಲಾಖೆಗೆ ಟೆನ್ಷನ್ ಶುರುವಾಗಿದೆ.

LEAVE A REPLY

Please enter your comment!
Please enter your name here