ಬೆಂಗಳೂರು:
ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಹೆಚ್ಚುವರಿಯಾಗಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಲ್ಲೂ ಮಳೆಯಾಗುವ ನಿರೀಕ್ಷೆಯಿದೆ. ಆದರೆ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ.