Home Uncategorized 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ವಿಚಾರ: ತಡೆ ನೀಡಲು ಹೈಕೋರ್ಟ್ ನಕಾರ,...

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ವಿಚಾರ: ತಡೆ ನೀಡಲು ಹೈಕೋರ್ಟ್ ನಕಾರ, ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿಕೆ

22
0
Advertisement
bengaluru

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ತಡೆ ನೀಡಲು ಹೈಕೋರ್ಟ್ ನಕಾರವೆತ್ತಿದ್ದು, ಪ್ರಕರಣದ ವಿಚಾರಣೆಯನ್ನು ಮಾರ್ಚ್ 14ಕ್ಕೆ ಮುಂದೂಡಿದೆ. ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ತಡೆ ನೀಡಲು ಹೈಕೋರ್ಟ್ ನಕಾರವೆತ್ತಿದ್ದು, ಪ್ರಕರಣದ ವಿಚಾರಣೆಯನ್ನು ಮಾರ್ಚ್ 14ಕ್ಕೆ ಮುಂದೂಡಿದೆ.

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ (Board exams) ರದ್ದು ಹಿನ್ನೆಲೆ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಕಾರವೆತ್ತಿದ್ದು, ಮಾರ್ಚ್ 14ಕ್ಕೆ‌ ಹೈಕೋರ್ಟ್ ವಿಚಾರಣೆ ಮುಂದೂಡಿದೆ.

ಸರ್ಕಾರದ ನಿರ್ಧಾರದ ವಿರುದ್ಧ ರುಪ್ಸಾ ಅರ್ಜಿ
ಈ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ನಿರ್ಧರಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪಬ್ಲಿಕ್ ಪರೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. 2022-23ನೇ ಸಾಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ 12 ಡಿಸೆಂಬರ್​ 2022 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಕ್ರಮ ಪ್ರಶ್ನಿಸಿ ರುಪ್ಸಾ ತಕರಾರು ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: 5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆ ರದ್ದು; ಹೈಕೋರ್ಟ್ ಮಹತ್ವದ ತೀರ್ಪು

bengaluru bengaluru

ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠವು ಮಧ್ಯಂತ ತಡೆ ನೀಡಲು ನಿರಾಕರಿಸಿತ್ತು. ಬಳಿಕ ರುಪ್ಸಾ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್​​ ಎಸ್​. ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರಸಕ್ತ ಶೈಕ್ಷಣಿಕ ಸಾಲಿನ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಸೂಚಿಸಿದೆ. ಈ ಹಿನ್ನೆಲೆ ಏಕಸದಸ್ಯ ಪೀಠ ಮಾ. 10 ರಂದು ತೀರ್ಪು ನೀಡಿತ್ತು.

ಈ ಕುರಿತಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ.ವಿಶಾಲ್ ಪ್ರತಿಕ್ರಿಯೆ ನೀಡಿದ್ದು, ನಮಗೆ ಈ ಬಗ್ಗೆ ಮಾಹಿತಿ ಬಂದಿದೆ. ವಿವರವಾದ ಆದೇಶ ಕೈ ಸೇರಿದ ಮೇಲೆ ಮಾಹಿತಿ ನೀಡುತ್ತೇವೆ. ಆದರೆ ವಿವರವಾದ ಆದೇಶ ಬಂದ ಮೇಲೆ ಯಾವ ಕ್ರಮ ತಗೆದುಕೊಳ್ಳಬೇಕು ಅಂತಾ ಚರ್ಚೆ ಮಾಡಿ ತಿಳಿಸುವುದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆಗೆ ಮೊದಲ ದಿನ ಶೇ.95.5 ರಷ್ಟು ವಿದ್ಯಾರ್ಥಿಗಳು ಹಾಜರು; ಇಬ್ಬರು ಡಿಬಾರ್

ಪರೀಕ್ಷೆ ಮುಂದೂಡಿಕೆ: ರಾಜ್ಯ ಸರ್ಕಾರ
ಮಾರ್ಚ್ 13ರಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡುವುದಾಗಿ ಸರ್ಕಾರ ತಿಳಿಸಿದೆ. ಈ ಶೈಕ್ಷಣಿಕ ವರ್ಷದಿಂದ 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿದ್ದು, ಬೋರ್ಡ್ ಪರೀಕ್ಷೆಗೆ ತಡೆ ನೀಡುವ ಮೂಲಕ ಹೈಕೋರ್ಟ್‌ ಶಿಕ್ಷಣ ಇಲಾಖೆಗೆ ಬಿಗ್ ಶಾಕ್ ನೀಡಿತ್ತು.


bengaluru

LEAVE A REPLY

Please enter your comment!
Please enter your name here