Home ಬೆಂಗಳೂರು ನಗರ ಕಾಸಿಗಾಗಿ ಹುದ್ದೆಯಲ್ಲಿ 500 ಕೋಟಿ ರೂಪಾಯಿ ಕೈ ಬದಲು: ಹೆಚ್.ಡಿ.ಕುಮಾರಸ್ವಾಮಿ ಆರೋಪ

ಕಾಸಿಗಾಗಿ ಹುದ್ದೆಯಲ್ಲಿ 500 ಕೋಟಿ ರೂಪಾಯಿ ಕೈ ಬದಲು: ಹೆಚ್.ಡಿ.ಕುಮಾರಸ್ವಾಮಿ ಆರೋಪ

28
0
500 crore rupees changed hands in post for money: HD Kumaraswamy alleges
500 crore rupees changed hands in post for money: HD Kumaraswamy alleges

ಬೆಂಗಳೂರು:

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಸತತ ಎರಡು ತಿಂಗಳಿಂದ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಈ ಅವಧಿಯಲ್ಲಿ ಕಾಸಿಗಾಗಿ ಹುದ್ದೆ ವ್ಯವಹಾರದಲ್ಲಿ 500 ಕೋಟಿ ರೂಪಾಯಿಗೂ ಮೀರಿ ಕೈ ಬದಲಾಗಿದೆನಡೆದಿದೆ ಎಂಬ ಮಾಹಿತಿ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ವರ್ಗಾವರ್ಗಿ ದಂಧೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಅವ್ಯವಹಾರ ನಡೆದಿದೆ ಎಂಬ ಬಗ್ಗೆ ನನಗೆ ಮಾಹಿತಿ ಇದೆ. ಆ ಬಗ್ಗೆ ಎಲ್ಲಾ ಕಡೆ ಚರ್ಚೆ ಆಗುತ್ತಿದೆ ಎಂದರು.

ಕರ್ನಾಟಕ ಸಮೃದ್ಧವಾಗಿದೆ. ಜನ ಪ್ರಾಮಾಣಿಕವಾಗಿ ತೆರಿಗೆ ಕಟ್ಟಿ ಖಜಾನೆ ತುಂಬಿಸುತ್ತಿದ್ದಾರೆ. ಎಲ್ಲಾ ಮೇವು ಸಮೃದ್ಧವಾಗಿದೆ. ಇಲ್ಲಿ ಚೆನ್ನಾಗಿ, ಪೊಗದಸ್ತಾಗಿ ಮೇಯುತ್ತಿದ್ದಾರೆ. ಆ ಮೇವನ್ನು ಇಡೀ ದೇಶಕ್ಕೆಲ್ಲ ಹಂಚಲು ಹೊರಟಿದ್ದಾರೆ. ಇದೇನಾ ಕರ್ನಾಟಕದ ಮಾದರಿ ಎಂದರೆ? ಇದೇನಾ ಹೊಸ ಭರವಸೆ, ಹೊಸ ಕನಸು? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಈಗ ನಡೆಯುತ್ತಿರುವ ಯೋಜನೆಗಳ ಕಾಮಗಾರಿಗಳ ಒಟ್ಟು ಅಂದಾಜು ವೆಚ್ಚವನ್ನು 20-30%ಗೆ ಹೆಚ್ಚಳ ಮಾಡಿಕೊಳ್ಳಲಾಗುತ್ತಿದೆ. ಕಮಿಷನ್ ಹೊಡೆಯೋದಕ್ಕೆ ಏನು ಬೇಕೋ ಅದನ್ನು ಮಾಡಿಕೊಳ್ಳುತ್ತಿದ್ದಾರೆ. ಸಚಿವರೊಬ್ಬರು ಒಂದು ಪತ್ರಿಕೆಯ ಕಟಿಂಗ್ ಇಟ್ಟುಕೊಂಡು ಎಲ್ಲೆಲ್ಲಿ ರೇಟ್ ಫಿಕ್ಸ್ ಆಗಿದೆ ಅಂತ ಹೇಳಿದರು. ನಾನು ಆ ಕಟಿಂಗ್ ನಲ್ಲಿರುವ ಸುದ್ದಿ ಯಾವುದು ಎಂದು ಪತ್ತೆ ಹಚ್ಚಿದೆ. ತೀರಾ ನೀಡಿದ ಮೇಲೆ ಅದು 2013ರಿಂದ 2018ರವರೆಗೆ ನಡೆದಿರುವ ವರ್ಗಾವಣೆ ದಂಧೆಗೆ ಸಂಬಂಧಿಸಿದ ಸುದ್ದಿ. “ಮುಖ್ಯ ಎಂಜಿನಿಯರ್ ಹುದ್ದೆಗೆ 30 ಕೋಟಿ ಕಪ್ಪಾ” ಎನ್ನುವ ಸುದ್ದಿಯ ಕಟಿಂಗ್ ಅದು. ಅದು ರೇವಣ್ಣ ಅವರದ್ದಾಗಲಿ, ನನ್ನ ಕಾಲದ್ದಾಗಲಿ ಆಗಿರಲಿಲ್ಲ ಎಂದು ಟಾಂಗ್ ನೀಡಿದರು ಮಾಜಿ ಮುಖ್ಯಮಂತ್ರಿಗಳು.

ಯಾರಪ್ಪಾ ಈ ಸೂರಿ ಪಾಯಲ್?:

ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಹುಲುಸಾಗಿ ಮೇಯಲು ಮೇವು ಇದೆ. ಅದನ್ನು ಮೇಯಲು ಯಾರು ಯಾರನ್ನು ಬಿಟ್ಟಿದ್ದಾರೆ ಎಂಬುದು ಇವತ್ತಿನ ಪತ್ರಿಕೆಗಳಲ್ಲಿ ಬಂದಿದೆ. ಪರಿಸರ ಇಲಾಖೆಯಲ್ಲಿ ದಂಧೆ ಶುರುವಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

ಯಾರೋ ಸೂರಿ ಪಾಯಲ್ ಅಂತೆ. ನಾನು ಇದೇ ಮೊದಲಿಗೆ ಈ ಹೆಸರು ಕೇಳಿದ್ದು. ನಾನು ಅದೆಂಥದೋ ಅವನ್ಯಾರೋ ಫಾರಿನರ್ ತರ ಇದ್ದಾನೆ ಅಂದುಕೊಂಡಿದ್ದೆ. ಅದೂ ಲೋಕಲ್ ಅನ್ನುವುದು ಆಮೇಲೆ ಗೊತ್ತಾಯಿತು. ಮಾತೆತ್ತಿದರೆ ಸರ್ವಜನಾಂಗದ ಶಾಂತಿಯ ತೋಟ ಅಂದರು. ಆದರೆ, ಅದು ಇವರು ಮೇಯುವ ಸಮೃದ್ಧಿಯ ತೋಟವಾಗಿದೆ. ಎಲ್ಲಿ ನೋಡಿದರೂ ಸ್ವಜನ ಪಕ್ಷಪಾತ, ವರ್ಗಾವಣೆ ದಂಧೆ ಜೋರಾಗಿ ನಡೆದಿದೆ ಎಂದು ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ರಾಜಕೀಯ ನಿವೃತ್ತಿ ಸವಾಲು ಹಾಕಿದ ಹೆಚ್ಡಿಕೆ:

ನನ್ನ ವಿಚಾರದಲ್ಲಿ ಒಂದೇ ಒಂದು ವರ್ಗಾವಣೆ ಪ್ರಕರಣ ತೋರಿಸಿ ಸಾಭೀತು ಮಾಡಿದರೆ ಸಕ್ರಿಯ ನಾನು ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ. ಅಂಥ ಮಾತು ಹೇಳುವ ಧೈರ್ಯ ಇವರಿಗೆ ಇದೆಯಾ? ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಹೇಗೆಲ್ಲಾ ಮೆಯುತ್ತಿದ್ದಾರೆ ಎಂಬುದು ಎಲ್ಲರಿಗೂ ಚೆನ್ನಾಗಿ ಅರ್ಥವಾಗುತ್ತಿದೆ. ಅಧಿಕಾರಿಯೊಬ್ಬರು ನನ್ನನ್ನು ಭೇಟಿಯಾಗಿದ್ದಾಗ ವರ್ಗಾವಣೆ ದಂಧೆಯ ಬಗ್ಗೆ ಹೇಳಿದರು. ಈವರೆಗೂ ಕಡಿಮೆ ಎಂದರೂ 500 ಕೋಟಿ ರೂಪಾಯಿಗೂ ಮಿಕ್ಕಿ ವ್ಯವಹಾರ ನಡೆದಿದೆ ಎಂದು ಅವರು ಹೇಳಿದರು. ಸರಕಾರದಿಂದ ವರ್ಗಾವಣೆ ಕಿರುಕುಳಕ್ಕೆ ಒಳಗಾಗಿರುವ ಅಧಿಕಾರಿಗಳು ಸುಳ್ಳು ಹೇಳುತ್ತಾರೆಯೇ? ಇದೆಕ್ಕೆಲಾ ಸಾಕ್ಷಿ ಸಂಗ್ರಹ ಮಾಡಲು ಸಾಧ್ಯವೇ? ಈ ರೀತಿ ಆದರೆ ರಾಜ್ಯ ಉಳಿಯುತ್ತಾ? ಎಂದು ಮಾಜಿ ಮುಖ್ಯಮಂತ್ರಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಟ್ರಾನ್ಸ್‌ಫರ್ ದಂಧೆಯ ಬಗ್ಗೆ ನಾನೊಬ್ಬನೇ ಹೇಳುತ್ತಿಲ್ಲ. ಎಲ್ಲರೂ ಮಾತನಾಡುತ್ತಿದ್ದಾರೆ. ಅಧಿಕಾರಿಗಳು ಸೇರಿ ಪ್ರತಿಯೊಬ್ಬರೂ ಹಾದಿಬೀದಿಯಲ್ಲಿ ಮಾತನಾಡುತ್ತಿದ್ದಾರೆ ಎಂದ ಮಾಜಿ ಮುಖ್ಯಮಂತ್ರಿ ಅವರು; ವಿಧಾನಸಭೆಯಲ್ಲಿ ಮಾತನಾಡಿದ್ದ ಮುಖ್ಯಮಂತ್ರಿಗಳು, ವರ್ಗಾವಣೆ ದಂಧೆಯಲ್ಲಿ ನಾನು ತೊಡಗಿಲ್ಲ, ಯಾರಾದರೂ ತೊಡಗಿದ್ದರೆ ನನಗೆ ಗೊತ್ತಿಲ್ಲ. ಗೊತ್ತಿಲ್ಲದೆ ಯಾರಾದರೂ ತೊಡಗಿದ್ದರೆ ಮಾಹಿತಿ ಇಲ್ಲ. ಹೀಗೆ ಮುಖ್ಯಮಂತ್ರಿಗಳು ಮಾತನಾಡಿದರೆ ಅರ್ಥವೇನು? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಇದಾದ ಮೇಲೆ ರೇಟ್ ಕಾರ್ಡ್ ರಿಲೀಸ್ ಆಯಿತು. XL ಶೀಟ್‌ನಲ್ಲಿ ಇವರ ಭ್ರಷ್ಟಾಚಾರದ ವಿಶ್ವರೂಪ ಬಯಲಾಯಿತು. ಇವರ ಹಣೆಬರಹ ಏನೂಂತ ಇಡೀ ಜಗತ್ತಿಗೆ ಗೊತ್ತಾಯಿತು. ನನ್ನ ಕಾಲದಲ್ಲಿ ಏನೂ ಇಲ್ಲ. 2008 ರಿಂದ 2013ರ ಅವಧಿಯಲ್ಲಿ ಮಾಗಡಿ ವಿಧಾನಸಭೆಯಲ್ಲಿ ನಡೆದ ರಸ್ತೆ ಕಾಮಗಾರಿ ಹೇಳಲಿ ನೋಡೋಣ. ಇದು ಸಿದ್ದರಾಮಯ್ಯ, ಮಹದೇವಪ್ಪ ಅವರ ಕಾಲದ್ದು ಎಂದು ಕುಮಾರಸ್ವಾಮಿ ಅವರು ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಕಥೆ ಬಿಚ್ಚಿಟ್ಟ ಮಾಜಿ ಸಿಎಂ:

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅರುಣ್ ಕುಮಾರ್ ಎಂಬ ಅಧಿಕಾರಿಯನ್ನು ನೇಮಕ ಮಾಡಲಾಗಿತ್ತು. ಅವರನ್ನು ಅಕ್ರಮವಾಗಿ ತೆಗೆದು ರಾಜಶೇಖರ್ ಅನ್ನುವ ಅಧಿಕಾರಿಯನ್ನು ನೇಮಕ ಮಾಡಿತ್ತು ಈ ಸರಕಾರ. ಅಲ್ಲಿ ವ್ಯವಹಾರ ನಡೆದಿದೆ ಅಂತ ಯಾರೋ ನ್ಯಾಯಾಲಯಕ್ಕೆ ಹೋದರು. ಕೋರ್ಟ್ ಛೀಮಾರಿ ಹಾಕಿದ ಮೇಲೆ ಮತ್ತೆ ರಾಜಶೇಖರ್ ಅವರನ್ನೇ ಮರು ನೇಮಕ ಮಾಡಲಾಯಿತು. ಇದು ಈ ಸರಕಾರದ ದಂಧೆಯ ಒಂದು ಸ್ಯಾಂಪಲ್ ಅಷ್ಟೇ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಹಿಂದೆ 1,500 ಕೋಟಿ ರೂಪಾಯಿ ಹಗರಣ ನಡೆದಿತ್ತು. ಕಮೀಷನ್ ಪಡೆದು ವರ್ಕ್ ಆರ್ಡರ್ ಕೊಟ್ಟ ಕಥೆ ಗೊತ್ತಿದೆ. ಸಂಬಂಧಪಟ್ಟ ಇಲಾಖೆಯ ಅನುಮತಿ ಇಲ್ಲದೆ 1,500 ಕೋಟಿ ರೂಪಾಯಿ ವರ್ಕ್ ಆರ್ಡರ್ ನೀಡಿದರು.ಆಗ ಹೆಚ್.ಸಿ.ಮಹಾದೇವಪ್ಪ ಅವರು ಆ ಇಲಾಖೆಯ ಮಂತ್ರಿ ಆಗಿದ್ದರು. ಉಳಿದದ್ದು ಎಲ್ಲರಿಗೂ ತಿಳಿದಿದೆ. ಇವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಎಲ್ಲ ಶಾಸಕರು ಹಾಜರಿದ್ದರು.

LEAVE A REPLY

Please enter your comment!
Please enter your name here