Home ವಿಜಯಪುರ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ,ಮಧ್ಯಕರ್ನಾಟಕಕ್ಕೆ ವರ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ,ಮಧ್ಯಕರ್ನಾಟಕಕ್ಕೆ ವರ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

41
0
Bommai in Belgaum Assemby Session on December 12
Advertisement
bengaluru

ವಿಜಯಪುರ, (ಮುದ್ದೇಬಿಹಾಳ):

ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ನೀಡಿದ್ದು, ಬರಗಾಲಪೀಡಿತ ಪ್ರದೇಶವಾದ ಮಧ್ಯಕರ್ನಾಟಕಕ್ಕೆ ದೊಡ್ಡ ಕೊಡುಗೆ ನರೇಂದ್ರ ಮೋದಿಯವರ ಸರ್ಕಾರ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುದ್ದೇಬಿಹಾಳದಲ್ಲಿ ಅವರು ಇಂದು ಕೇಂದ್ರ ಬಜೆಟ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ರೈತರಿಗೆ ಬಹಳಷ್ಟು ಒತ್ತು ನೀಡಿ ಅನುದಾನವನ್ನೂ ಒದಗಿಸಿದ್ದಾರೆ. ಯುವಕರ ಕೈಗಳಿಗೆ ಉದ್ಯೋಗ ನೀಡಲು ಅತಿ ಹೆಚ್ಚಿನ ಉತ್ತೇಜನ ನೀಡಿ ವಿಶೇಷ ಅನುದಾನ ಮೀಸಲಿಟ್ಟಿದ್ದಾರೆ.

bengaluru bengaluru

ಕೈಗಾರಿಕಾ ಅಭಿವೃದ್ಧಿ, ಮೂಲಸೌಕರ್ಯ ಅಭಿವೃದ್ದಿಗೆ, ರೈಲ್ವೆಗೆ ಅತಿ ಹೆಚ್ಚಿನ ಅನುದಾನ ಒದಗಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುವ ದೃಷ್ಟಿಯಿಂದ ಎಲ್ಲರನ್ನೂ ಒಳಗೊಂಡಿರುವ ಅಭಿವೃದ್ಧಿಯಾಗಲು ಒತ್ತು ನೀಡಲಾಗಿದೆ. ಪ್ರಧಾನಮಂತ್ರಿಗಳಿಗೆ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಬಯಸುತ್ತೇನೆ ಎಂದರು.


bengaluru

LEAVE A REPLY

Please enter your comment!
Please enter your name here