
6 people died on the spot after car collided with lorry near Kushtagi
ಕೊಪ್ಪಳ:
ಲಾರಿ ಮತ್ತು ಕಾರು ನಡುವೆ ಅಪಘಾತ ಉಂಟಾಗಿದ್ದು, ಸ್ಥಳದಲ್ಲಿಯೇ ಆರು ಜನ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ನಡಿದೆ.
ಡಿಕ್ಕಿಯ ರಭಸಕ್ಕೆ ಇಂಡಿಕಾ ಕಾರು ನಜ್ಜುಗುಜ್ಜಾಗಿದೆ. ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ಕಾರಿನ ಟೈರ್ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ.
ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಮತ್ತು ರಶ್ಮಿಕಾ ಮೃತ ದುರ್ದೈವಿಗಳು. ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಲಾಗುತ್ತಿದೆ.
ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.