Home Uncategorized 74ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿ, ರಾಜ್ಯ ಸರ್ಕಾರದ ಸಾಧನೆಗಳ ಕೊಂಡಾಡಿದ ರಾಜ್ಯಪಾಲ ಗೆಹ್ಲೋಟ್‌

74ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿ, ರಾಜ್ಯ ಸರ್ಕಾರದ ಸಾಧನೆಗಳ ಕೊಂಡಾಡಿದ ರಾಜ್ಯಪಾಲ ಗೆಹ್ಲೋಟ್‌

16
0

74ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್​​ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು. ಬೆಂಗಳೂರು: 74ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್​​ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಜನತೆಯನ್ನುದ್ದೇಶಿಸಿ ಮಾತನಾಡಿದರು.

ಧ್ವಜಾರೋಹಣ ನೆರವೇರಿಸಿದ ಬಳಿಕ ಜನತೆಯನ್ನುದ್ದೇಶಿ ಮಾತನಾಡಿದ ರಾಜ್ಯಪಾಲರು, ನವಭಾರತಕ್ಕಾಗಿ ನವ ಕರ್ನಾಟಕ ಧ್ಯೇಯದೊಂದಿಗೆ ಗಣರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಎಲ್ಲಾ ವರ್ಗಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಬಡವರು, ದಲಿತರು, ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಶ್ರಮವಹಿಸುತ್ತಿದೆ. ದೇಶದ ಸ್ವಾತಂತ್ರ್ಯ ಅಮೃತಮಹೋತ್ಸದಡಿ ಶಾಲೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.

ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 6,478.76 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈ ಯೋಜನೆಯಡಿ 13.47 ಕೋಟಿ ದಿನಗೂಲಿ ಉದ್ಯೋಗ ಸೃಷ್ಟಿಸಲಾಗಿದೆ. ಕಾರ್ಮಿಕರ ಖಾತೆಗೆ 4,110 ಕೋಟಿ ನೇರವಾಗಿ ಜಮೆ ಮಾಡಲಾಗಿದೆ. 2022ರಲ್ಲಿ 13.35 ಲಕ್ಷ ಮನೆಗಳಿಗೆ ಮೂಲಸೌಕರ್ಯ ಕಲ್ಪಿಸಲಾಗಿದೆ. ಇದಕ್ಕಾಗಿ 2314.34 ಕೋಟಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

ಕಂದಾಯ ಗ್ರಾಮಗಳ ಘೋಷಣೆಯಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ. 2020-23ರ ಸಾಲಿನಲ್ಲಿ 20.19 ಲಕ್ಷ ರೈತರಿಗೆ ಬೆಳೆ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ 15,066 ಕೋಟಿ ಬೆಳೆ ಸಾಲ ನೀಡಲಾಗಿದೆ. ಮಹಿಳಾ ಸ್ವಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ಸಾಲ ನೀಡಲಾಗುವುದು. ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ಟ್ರಸ್ಟ್​​ನಡಿ 32.32 ಲಕ್ಷ ನೋಂದಣಿಗಳಾಗಿವೆ ಎಂದು ಹೇಳಿದರು..

LEAVE A REPLY

Please enter your comment!
Please enter your name here