ಬೆಂಗಳೂರು ಗ್ರಾಮಾಂತರ, ಆಗಸ್ಟ್ 15: 79ನೇ ಸ್ವಾತಂತ್ರ್ಯೋತ್ಸವವನ್ನು ದೇವನಹಳ್ಳಿ ತಾಲ್ಲೂಕುಯ ಬೀರಸಂದ್ರ ಗ್ರಾಮದಲ್ಲಿನ ಜಿಲ್ಲಾ ಆಡಳಿತ ಭವನ ಆವರಣದಲ್ಲಿ ದೇಶಭಕ್ತಿಯಿಂದ ಆಚರಿಸಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.
ಕಾರ್ಯಕ್ರಮದ ಅಂಗವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್. ಅನುರಾಧ, ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಹಾಗೂ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.