ಬೆಂಗಳೂರು: ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಲ್ಲದೆ ಶಾಂತಿಯುವಾಗಿ ಶೇ.86.38ರಷ್ಟು ಮತದಾನವಾಗಿದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಚುನಾವಣಾಧಿಕಾರಿಯ ಪ್ರಕಟಣೆ ತಿಳಿಸಿದೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿಯಾಗಿ ಎ.ಪಿ.ರಂಗನಾಥ್ ಕಣಕ್ಕಿಳಿದಿದ್ದಾರೆ. ಫೆ.20ರಂದು ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಹಿಂದೆ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಪುಟ್ಟಣ್ಣ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಉಪ ಚುನಾವಣೆ ನಡೆದಿದೆ.
ಕರ್ನಾಟಕ ವಿಧಾನ ಪರಿಷತ್ ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಅಂತ್ಯಗೊಂಡಿದ್ದು, ಶಿಕ್ಷಕರ ಒಟ್ಟಾರೆ ಶೇಕಡಾವಾರು ಮತದಾನ ಪ್ರಕಟವಾಗಿದೆ. ಮತದಾನ ಮಾಡಿದ ಎಲ್ಲ ಶಿಕ್ಷಕರಿಗೆ ನಮ್ಮ ಕೃತಜ್ಞತೆಗಳು.#eci #sveep #ceokarnataka #bangalore #teachers #constituency #smartvoters #ivote4sure #voterturnout #16thfeb pic.twitter.com/f4Yj8ATVwm
— Chief Electoral Officer, Karnataka (@ceo_karnataka) February 16, 2024
ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 19,152 ಮತದಾರರಿದ್ದು, ಈ ಉಪ ಚುನಾವಣೆಯಲ್ಲಿ 16,544 ಮಂದಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
