Home ಅಪರಾಧ ಯೋಗಿಶ್ ಗೌಡ ಕೊಲೆ ಪ್ರಕರಣ , ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

ಯೋಗಿಶ್ ಗೌಡ ಕೊಲೆ ಪ್ರಕರಣ , ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

90
0

ಬೆಂಗಳೂರು:

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗಿಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಗುರುವಾರ ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದೆ.

ಯೋಗಿಶ್ ಗೌಡ ಹತ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದ ಬರಕೊಟ್ರಿಯಲ್ಲಿರುವ ನಿವಾಸದಲ್ಲಿ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದೂ ವರದಿಯಾಗಿದೆ.

2016ರ ಜೂನ್ 15ರಂದು ನಡೆದಿದ್ದು ಧಾರವಾಡ ಜಿ.ಪಂ. ಸದಸ್ಯ ಯೋಗೇಶ್ ಗೌಡ ಅವರ ಕೊಲೆ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆಯಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here