Home ಚಿಕ್ಕಬಳ್ಳಾಪುರ ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ 65 ವರ್ಷದ ಮುದುಕಿಯ ಮೇಲೆ ರೇಪ್

ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ 65 ವರ್ಷದ ಮುದುಕಿಯ ಮೇಲೆ ರೇಪ್

33
0

ಚಿಕ್ಕಬಳ್ಳಾಪುರ: ಆಘಾತಕಾರಿ ಘಟನೆ ಒಂದು ಹೊರ ಬಿದ್ದಿದ್ದು, ಆಸ್ಪತ್ರೆಯಲ್ಲೇ 65 ವರ್ಷದ ಮುದುಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಜರುಗಿದೆ.

ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಘಟನೆ ಜರುಗಿದ್ದು, ಮುಸ್ಲೀ ಯುವಕನಿಂದ ಕೃತ್ಯ ನಡೆದಿದೆ. ಇರ್ಫಾನ್ (24) ಅತ್ಯಾಚಾರ ಎಸಗಿದ ಆರೋಪಿ. ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದು ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಬಳಿ ವೃದ್ಧೆ ಇದ್ದಾಗ, ಯುವಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಆರೋಪಿಯನ್ನು ಚಿಂತಾಮಣಿಯ ಹೈದರಾಲಿ ನಗರದ ನಿವಾಸಿ ಎಂದು ಗುರುತಿಸಲಾಗಿದೆ. ಅಸ್ವಸ್ಥ ವೃದ್ಧೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಬಗ್ಗೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂತೋಷ ಕುಮಾರ್ ಚಿಂತಾಮಣಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here