ಬೆಂಗಳೂರು:
ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕೆಎಎಸ್ ಅಧಿಕಾರಿ ಡಾ.ಸುಧಾ ಆಪ್ತರ ಮೇಲೆ ಮತ್ತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮುಂದುವರೆಸಿದೆ.
ಏಕಕಾಲದಲ್ಲಿ ನಗರದ 9 ಕಡೆ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ಮಾಡಿ, ಶೋಧ ಕಾರ್ಯ ನಡೆಸುತ್ತಿದೆ.
ಈ ಹಿಂದೆ ನ.7 ರಂದು ಡಾ.ಸುಧಾ ಹಾಗೂ ಅವರ ಆಪ್ತರ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿತ್ತು. ಈ ವೇಳೆ 36.89 ಲಕ್ಷ ರೂ. ನಗದು 3.7 ಕೆಜಿ ಚಿನ್ನಾಭರಣ ಮತ್ತು 10.5 ಕೆ.ಜಿ ಬೆಳ್ಳಿ ವಸ್ತುಗಳು ಸೇರಿ 3.5 ಕೋಟಿ ಠೇವಣಿ ಪತ್ತೆಯಾಗಿತ್ತು.
ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಅವರು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಜೂ. 18ರಂದು ಖಾಸಗಿ ದೂರು ಸಲ್ಲಿಸಿದ್ದರು.
ದೂರಿನ ಅನ್ವಯ ಆರೋಪಗಳ ಕುರಿತು ತನಿಖೆ ನಡೆಸುವಂತೆ ನ್ಯಾಯಾಲಯ ಎಸಿಬಿ ತನಿಖೆಗೆ ಆದೇಶಿಸಿತ್ತು. ಆ. 27 ರಂದು ಎಸಿಬಿ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದರು.