ಬೆಂಗಳೂರು:
ಅಕ್ರಮ ಆಸ್ತಿ ಸಂಪಾದನೆ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಇಂದು ಬೃಹತ್ ಕಾರ್ಯಾಚರಣೆ ಕೈಗೊಂಡಿದ್ದು, ರಾಜ್ಯದ 7 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 30 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ.
ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. 7 ಮಂದಿ ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಬೆಂಗಳೂರು ನಗರ, ಬಳ್ಳಾರಿ, ಕೋಲಾರ, ಧಾರವಾಡ, ದಕ್ಷಿಣ ಕನ್ನಡ, ಚಿತ್ರದುರ್ಗ , ಕಲಬುರಗಿ ಜಿಲ್ಲೆಗಳಲ್ಲಿ ಇರುವ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
ಧಾರವಾಡದ ಶಿಗ್ಗಾವಿಯ ಸಣ್ಣ ನೀರಾವರಿ ಇಲಾಖೆಯ ಇಇ ದೇವರಾಜ್ ಕಲ್ಲೇಶ್, ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಪ್ರಾದೇಶಿಕ ಸಹಕಾರಿ ಜಂಟಿ ನಿರ್ದೇಶಕ ಪಾಂಡುರಂಗ ಗರಗ್, ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಜಂಟಿನಿರ್ದೇಶಕ ಜಯರಾಜ್ ಕೆ.ವಿ, ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎನ್.ವಿಜಯಕುಮಾರ್, ಕೊಪ್ಪಳ ಕಿಮ್ಸ್ ಔಷಧ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ್, ಲೋಕೋಪಯೋಗಿ ಇಲಾಖೆಯ ಮಾಗಡಿ ಉಪ ವಿಭಾಗದ ಜೆ.ಇ. ಚನ್ನಬಸಪ್ಪ ಅವತಿ, ಧಾರವಾಡ ಎಸಿಎಫ್ ಶ್ರೀನಿವಾಸ್ ಅವರ ಮನೆ ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ನಡೆಸಲಾಗುತ್ತಿದೆ.
Nameof the officers.
— Thebengalurulive/ಬೆಂಗಳೂರು ಲೈವ್ (@bengalurulive_) February 2, 2021
Devraj kallesh, EE Minor irrigation
Pandurang Garag, Joint Registrar Cooperatives, Malleswaram
Jayaraj KV, Joint Director Town Planning
Dr S N Vijaykumar, DHO Kolar
Dr Srinivas HOD Pharmacology Koppal
Channabasappa Avati JE PWD Magadi Srinivas.ACF.Dharwad