Home ಅಪರಾಧ Shocking Road Mishap in Belagavi: Car Collides with Tipper, Ends in Fiery...

Shocking Road Mishap in Belagavi: Car Collides with Tipper, Ends in Fiery Tragedy | ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ; ಇಬ್ಬರ ಸಜೀವ ದಹನ

54
0
Shocking Road Mishap in Belagavi: Car Collides with Tipper, Ends in Fiery Tragedy

ಬೆಳಗಾವಿ:

ಸಂಬಂಧಿಕರ ಮದುವೆ ಮುಗಿಸಿಕೊಂಡು ವಾಪಸ್ ಮನೆಗೆ ಹೋಗುತ್ತಿದ್ದಾಗ ಟಿಪ್ಪರ್ ಮತ್ತು ಕಾರಿನ ಮಧ್ಯೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಇಬ್ಬರ ಸಜೀವ ಧಹನವಾಗಿರುವ ಘಟನೆ ದೇವಗಿರಿ ಬಂಬರಗಾ ಕ್ರಾಸ್ ಬಳಿ ದುರ್ಘಟನೆ ನಡೆದಿದೆ.

ಬೆಳಗಾವಿ ತಾಲೂಕಿನ ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್(24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಮೃತ ದುರ್ದೈವಿಗಳು‌. ಮಹೇಶ್ ಬೆಳ್ಗಾಂವಕರ್ ಮತ್ತು ಸ್ನೇಹಾ ಬೆಳ್ಗುಂದ್ಕರ್ ಗಂಭೀರ ಗಾಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಸಂಬಂಧಿಕರ ಮದುವೆ ಮುಗಿಸಿಕೊಂಡು ರಾತ್ರಿ ಬಂಬರಗಾ ಗ್ರಾಮಕ್ಕೆ ಬರುವಾಗ ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ಆಗಿದೆ. ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ ಕಾರು ಡಿಕ್ಕಿಯಾಗಿದ್ದು ಅಪಘಾತದ ರಭಸಕ್ಕೆ ಟಿಪ್ಪರ್ ನ ಡಿಸೇಲ್ ಟ್ಯಾಂಕ್ ಒಡೆದು ಹೊತ್ತಿ ಉರಿದಿದ್ದು ಈ ವೇಳೆ ಕಾರಿನಲ್ಲಿದ್ದ ನಾಲ್ವರು ಪೈಕಿ ಇಬ್ಬರು ಸಜೀವ ದಹನ ಆಗಿದ್ದು ಗಂಭೀರ ಗಾಯಗೊಂಡ ಮತ್ತಿಬ್ಬರನ್ನ ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಮಾಹಿತಿ ತಿಳಿದು ಘಟನಾ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.ಸ್ಥಳಕ್ಕೆ ಡಿಸಿಪಿ ಸ್ನೇಹಾ, ಎಸಿಪಿ ಮತ್ತು ಕಾಕತಿ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರ ಶವವನ್ನ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.ಅಪಘಾತ ಆಗ್ತಿದ್ದಂತೆ ಪೊಲೀಸ್ ಠಾಣೆಗೆ ತೆರಳಿ ಟಿಪ್ಪರ್ ಡ್ರೈವರ್ ಶರಣಾಗಿದ್ದು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here