ಚಿತ್ರದುರ್ಗ ಬಳಿ ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಆಕಸ್ಮಿಕ ಬೆಂಕಿ, ತಪ್ಪಿದ ದುರಂತ
ಚಿತ್ರದುರ್ಗ: ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಹಿರಿಯೂರು ತಾಲೂಕಿನ ಗುಯಿಲಾಳು ಟೋಲ್ ಗೇಟ್ ಬಳಿ ನಡೆದಿದೆ.
ಇಲ್ಲಿನ ಗುಯಿಲಾಳು ಟೋಲ್ ಬಳಿ ಅವಘಡ ಒಂದು ಸಂಭವಿಸಿದೆ. ಟೈಯರ್ ಬ್ಲಾಸ್ಟ್ ಆಗಿ ಇಡೀ ಬಸ್ ಧಗಧಗನೆ ಹೊತ್ತಿ ಉರಿದಿದೆ.
ಬಸ್ ಬೆಂಗಳೂರಿಗೆ ಹೋಗುತ್ತಿದ್ದ ಮಾರ್ಗ ಮಧ್ಯದಲ್ಲಿ ಅವಘಡ ಸಂಭವಿಸಿದೆ. ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
