ಬೆಂಗಳೂರು:
ಕೊರೋನಾ ಲಾಕ್ ಡೌನ್ ತೆರವಾಗಿ ಥಿಯೇಟರ್ ಗಳನ್ನು ತೆರೆಯಲು ಗ್ರೀನ್ ಸಿಗ್ನಲ್ ದೊರೆತ ಬಳಿಕ ಇದೇ ಮೊದಲ ಬಾರಿಗೆ ಹೊಸ ಚಿತ್ರವೊಂದು ತೆರೆಕಾಣುತ್ತಿದೆ. ಎಂಟು ತಿಂಗಳ ನಂತರ ಇದೇ ನವೆಂಬರ್ 20 ರಂದು ಆಕ್ಟ್ 1978 ಚಿತ್ರ ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ.
ಡಿ.ಕ್ರಿಯೇಷನ್ಸ್ ಲಾಂಛನದಲ್ಲಿ ಅರ್ ದೇವರಾಜ್ ಅವರು ನಿರ್ಮಿಸಿರುವ ಈ ಚಿತ್ರಕ್ಕೆ ಮಂಸೋರೆ ಕಥೆ ಬರೆದು, ನಿರ್ದೇಶಿಸಿದ್ದಾರೆ.
ಮಂಸೋರೆ, ವೀರೇಶ್ ಮಲ್ಲಣ್ಣ ಹಾಗೂ ದಯಾನಂದ್ ಟಿ ಕೆ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.
Theatre list is growing and stands at 84 now. #ACT1978 could end up releasing in over a 100 screens. Single screens that were skeptical about reopening for last one month warming up to the buzz around this new release. pic.twitter.com/Wh3QDji1PQ
— ಎಸ್ ಶ್ಯಾಂ ಪ್ರಸಾದ್ S Shyam Prasad (@ShyamSPrasad) November 18, 2020
ರಾಹುಲ್ ಶಿವಕುಮಾರ್ ಸಂಗೀತ ನಿರ್ದೇಶನ, ಸತ್ಯ ಹೆಗಡೆ ಛಾಯಾಗ್ರಹಣ ಹಾಗೂ ನಾಗೇಂದ್ರ ಕೆ ಉಜ್ಜನಿ ಸಂಕಲನ ಈ ಚಿತ್ರಕ್ಕಿದೆ.
ಯಜ್ಞಾ ಶೆಟ್ಟಿ, ಪ್ರಮೋದ್ ಶೆಟ್ಟಿ, ಬಿ.ಸರೇಶ್, ಸಂಚಾರಿ ವಿಜಯ್, ಶೃತಿ, ದತ್ತಣ್ಣ, ಅಚ್ಯುತ ಕುಮಾರ್, ಅವಿನಾಶ್, ಸುಧಾ ಬೆಳವಾಡಿ, ಶೋಭ್ ರಾಜ್, ಶರಣ್ಯ, ನಂದಗೋಪಾಲ್, ರಾಘು ಶಿವಮೊಗ್ಗ, ಕಿರಣ್ ನಾಯಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.