Home ಬೆಂಗಳೂರು ನಗರ ಜನರಲ್ ಬಿಪಿನ್ ರಾವತ್ ಅವರ ಬಗ್ಗೆ ವಿಕೃತ ಪೋಸ್ಟ್ ಮಾಡಿದ ದೇಶ ವಿರೋಧಿಗಳ ಪತ್ತೆ ಹಚ್ಚಿ...

ಜನರಲ್ ಬಿಪಿನ್ ರಾವತ್ ಅವರ ಬಗ್ಗೆ ವಿಕೃತ ಪೋಸ್ಟ್ ಮಾಡಿದ ದೇಶ ವಿರೋಧಿಗಳ ಪತ್ತೆ ಹಚ್ಚಿ ಶಿಕ್ಷೆ ಆಗಬೇಕು: ಗೃಹ ಸಚಿವ

24
0
bengaluru

ಬೆಂಗಳೂರು:

ಭಾರತೀಯ ಸೇನಾ ಪಡೆಯ ವೀರ ಸೇನಾನಿ ಮತ್ತು ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರ ಅಕಾಲಿಕ ಸಾವಿನ ಕುರಿತು ಸಂಭ್ರಮಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವವರ ವಿರುದ್ಧ ಯಾವುದೇ ವಿಳಂಬವಿಲ್ಲದಂತೆ, ಪತ್ತೆ ಹಚ್ಚಿ ತೀವ್ರ ಕ್ರಮ ತೆಗೆಗೂಕೊಳ್ಳಬೇಕೆಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.

Also Read: Karnataka Home Minister orders strict police action against abusive posts on late Gen Bipin Rawat

ದೇಶದ ಹೆಮ್ಮೆಯ ಸೇನಾನಿಯಾ ಸಾವಿನ ಬಗ್ಗೆ, ಸಂಭ್ರವಿಸುವಂಥಹ ಭಾವನೆಗಳನ್ನು ಜಾಲತಾಣದಲ್ಲಿ ಹರಿಬಿಡುವ ದುಷ್ಕರ್ಮಿಗಳು, ದೇಶವಿರೋಧಿಗಳಾಗಿದ್ದು, ಅವರ ವಿಳಾಸವನ್ನು ಪತ್ತೆ ಹಚ್ಚಿ ವಿಕೃತ ಮನಸ್ಸುಗಳಿಗೆ ತಕ್ಕ ಶಿಕ್ಷೆ ಆಗಬೇಕು, ಎಂದಿರುವ ಸಚಿವರು, ಈ ಕುರಿತು ರಾಜ್ಯ ಪೊಲೀಸ್ ಮುಖ್ಯಸ್ಥ ಶ್ರೀ ಪ್ರವೀಣ್ ಸೂದ್ ಅವರೊಂದಿಗೆ ಮಾತನಾಡಿ, ಕೂಡಲೇ ಕ್ರಮ ಆಗಬೇಕು ಎಂದು ಸೂಚಿಸಿದ್ದಾರೆ.

bengaluru

Also Read: Karnataka CM orders legal action against those on social media rejoicing Gen Rawat’s death

ಜನರಲ್ ಬಿಪಿನ್ ರಾವತ್ ಅವರ ಅಕಾಲಿಕ ಸಾವು, ದೇಶಕ್ಕೆ ಭರಿಸಲಾಗದ ಅತಿ ದೊಡ್ಡ ನಷ್ಟ ಎಂದಿರುವ ಸಚಿವರು, “ರಾವತ್ ಅವರು ದೇಶಕ್ಕೆ ಸಲ್ಲಿಸಿರುವ ಸೇವೆ ಅಸಾಧಾರಣ” ಮತ್ತು ದಿವಂಗತರ ಬಗ್ಗೆ ವಿಕೃತ ಪೋಸ್ಟ್ ಮಾಡುವವರನ್ನು ಸಹಿಸುವುದಿಲ್ಲ, ಅವರಿಗೆ ಶಿಕ್ಷೆ ಯಾಗಬೇಕು, ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸೇನಾ ಮುಖ್ಯಸ್ಥರ ದುರ್ಮರಣ: ಟ್ವೀಟ್ ಮಾಡಿದವರ ವಿರುದ್ಧ ಕಾನೂನು ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ

bengaluru

LEAVE A REPLY

Please enter your comment!
Please enter your name here