Home High Court/ಹೈಕೋರ್ಟ್ ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು

ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು

14
0

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಗೆ ಜಾಮೀನು ಮಂಜೂರಾಗಿದೆ. ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಕೊನೆಗೂ ಬಿಡುಗಡೆ ಭಾಗ್ಯ ದೊರೆತಿದೆ.

ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದಾರೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ಸೆಷನ್ಸ್ ಕೋರ್ಟ್‌ ಮೊರೆ ಹೋಗಿದ್ದರು. ಆದರೆ ಅಲ್ಲಿ ಜಾಮೀನು ತಿರಸ್ಕೃತಗೊಂಡ ಪರಿಣಾಮ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಹೀಗಾಗಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದರು.

ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ವಾದ-ಪ್ರತಿವಾದವನ್ನು ಆಲಿಸಿ ಜಾಮೀನು ಮಂಜೂರು ಮಾಡಿದೆ.

LEAVE A REPLY

Please enter your comment!
Please enter your name here