Home ಕರ್ನಾಟಕ ಮನೆಯೂಟ, ಹಾಸಿಗೆಗೆ ಅನುಮತಿಸಲು ಸಲ್ಲಿಸಿದ್ದ ಅರ್ಜಿ ಹಿಂಪಡೆದ ನಟ ದರ್ಶನ್

ಮನೆಯೂಟ, ಹಾಸಿಗೆಗೆ ಅನುಮತಿಸಲು ಸಲ್ಲಿಸಿದ್ದ ಅರ್ಜಿ ಹಿಂಪಡೆದ ನಟ ದರ್ಶನ್

46
0

ಬೆಂಗಳೂರು : ಮನೆಯೂಟ, ಹಾಸಿಗೆ ಮತ್ತು ಪುಸ್ತಕ ಪೂರೈಕೆಗೆ ಅನುಮತಿಸಲು ಜೈಲು ಅಧಿಕಾರಿಗೆ ನಿರ್ದೇಶನ ಕೋರಿ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ.

ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರದಿದ್ದ ಪೀಠ  ನಡೆಸಿತು.

ಈ ವೇಳೆ ದರ್ಶನ್‌ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಹೈಕೋರ್ಟ್‌ ನಿರ್ದೇಶನದಂತೆ ಮನೆ ಊಟ ಪೂರೈಸಲು ಜೈಲು ಅಧಿಕಾರಿಗೆ ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾಧೀನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ತಿರಸ್ಕರಿಸಿದೆ. ಹೀಗಾಗಿ, ಹೈಕೋರ್ಟ್‌ನಲ್ಲಿ ಅರ್ಜಿ ಹಿಂಪಡೆಯಲು ಮೆಮೊ ಸಲ್ಲಿಸಿದ್ದೇವೆ. ಎಲ್ಲಾ ವಾದಗಳನ್ನು ಮುಕ್ತವಾಗಿರಿಸಿ, ಹೊಸ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ, ಈ ಅರ್ಜಿ ಹಿಂಪಡೆಯಲು ಅನುಮತಿಸಬೇಕು ಎಂದು ಮನವಿ ಮಾಡಿದರು.

ಈ ಹೇಳಿಕೆ ದಾಖಲಿಸಿಕೊಂಡ ಪೀಠವು ಅರ್ಜಿ ಹಿಂಪಡೆಯಲು ಅನುಮತಿ ನೀಡಿದೆ.

LEAVE A REPLY

Please enter your comment!
Please enter your name here