ಬೆಂಗಳೂರು:
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಅವರು ಮಾಗಡಿ ರಸ್ತೆಯ ಜನಪ್ರಿಯ ಅಪಾರ್ಟ್ಮೆಂಟ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಅಪಾರ್ಟ್ಮೆಂಟ್ನ ಮನೆಯಲ್ಲಿ ಜಯಶ್ರೀ ರಾಮಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಕನ್ನಡದ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ಜನಪ್ರಿಯ ಅಪಾರ್ಟ್ಮೆಂಟ್ನ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಹಿಂದೆಯೂ ನಟಿ ಜಯಶ್ರೀ ಆತ್ಮಹತ್ಯೆಗೆ ಯತ್ನಿಸಿ ಸಾವಿನಿಂದ ಬಚಾವ್ ಆಗಿ ಮಾನಸಿಕ ಖಿನ್ನತೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಖಿನ್ನತೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ಮಾದಯನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ. UNI