Home ಬೆಂಗಳೂರು ನಗರ ಇಂದಿನಿಂದ ನೇರಳೆ ಮಾರ್ಗದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಿಂದ ಹೆಚ್ಚುವರಿ ರೈಲು ಸೇವೆ

ಇಂದಿನಿಂದ ನೇರಳೆ ಮಾರ್ಗದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಿಂದ ಹೆಚ್ಚುವರಿ ರೈಲು ಸೇವೆ

18
0
Namma Metro

ಬೆಂಗಳೂರು: ಇಂದಿನಿಂದ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ ಹಿನ್ನೆಲೆಯಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಿಂದ ಹೆಚ್ಚುವರಿ ಮೆಟ್ರೋ ರೈಲು ಸೇವೆ ಕಲ್ಪಿಸಲಾಗುತ್ತಿದೆ ಎಂದು ಬಿಎಂಟಿಸಿಎಲ್ ತಿಳಿಸಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ಪ್ರಸ್ತುತ 9 ರೈಲುಗಳ ಬದಲಿಗೆ ಹೆಚ್ಚುವರಿ 15 ಮೆಟ್ರೋ ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುತ್ತದೆ. ಈ 15 ರೈಲುಗಳಲ್ಲಿ 10 ರೈಲುಗಳು ಪಟ್ಟಂದೂರು, ಅಗ್ರಹಾರದ (ಐಟಿಪಿಎಲ್‌) ವರೆಗೆ, 4 ರೈಲುಗಳು ವೈಟ್‌ಫೀಲ್ಡ್‌ ಮತ್ತು 1 ರೈಲು ಬೈಯಪ್ಪನಹಳ್ಳಿ ಕಡೆಗೆ ಸಂಚರಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಅದರಂತೆ ರೈಲುಗಳು ಕೆಂಪೇಗೌಡ ನಿಲ್ದಾಣದಿಂದ ಬೆಳಗ್ಗೆ 8:48 ಗಂಟೆಯಿಂದ 8:58, 9:18, 9:29, 9:39, 9:50, 10:00, 10:21, 10:39, 10:50, 11:00, 11:22 ಗಂಟೆಗೆ ಪೂರ್ವಕ್ಕೆ ಸಂಚರಿಸಲಿವೆ. ಅಲ್ಲದೇ ಮೆಜೆಸ್ಟಿಕ್‌ನಲ್ಲಿ 3.3 ನಿಮಿಷಗಳ ಆವರ್ತನದಲ್ಲಿ ಬೆಳಗ್ಗೆ 10:25 ಗಂಟೆ ವರೆಗೆ ನಿಯಮಿತವಾಗಿ ಸಾಗುವ ರೈಲು ಸೇವೆಯೂ ಲಭ್ಯವಿರಲಿದೆ.

ಪ್ರಯಾಣಿಕರ ಬೇಡಿಕೆ ಪೂರೈಸಲು ಪ್ರಸ್ತುತ, ಗರುಡಾಚಾರ್‌ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14 ರೈಲುಗಳಲ್ಲಿ 6 ರೈಲುಗಳನ್ನು ಪಟ್ಟಂದೂರು ಅಗ್ರಹಾರ (ITPL) ಅಥವಾ ವೈಟ್‌ಫೀಲ್ಡ್‌ವರೆಗೆ ವಿಸ್ತರಿಸಲಾಗಿದೆ. ಗರುಡಾಚಾರ್‌ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಇಳಿಯುವ ಪ್ರಯಾಣಿಕರಿಗೆ ಪಟ್ಟಂದೂರು ಅಗ್ರಹಾರ ಕಡೆಗೆ ಪ್ರಯಾಣಿಸಲು ಮುಂದಿನ ರೈಲು 3.5 ನಿಮಿಷಗಳ ಆವರ್ತನದಲ್ಲಿ ಲಭ್ಯವಿರಲಿದೆ.

ಜೊತೆಗೆ 5 ನಿಮಿಷಗಳ ಆವರ್ತನದಲ್ಲಿ ಬೈಯಪ್ಪನಹಳ್ಳಿಯಿಂದ ಸಂಜೆ 4:40ರ ಬದಲಿಗೆ 4:20ಕ್ಕೆ ಮೈಸೂರು ರಸ್ತೆ ನಿಲ್ದಾಣದ ಕಡೆಗೆ ಪ್ರಾರಂಭವಾಗಲಿದೆ. ಆದ್ರೆ ಹಸಿರು ಮಾರ್ಗದ ರೈಲುಗಳಲ್ಲಿ ಯಾವುದೇ ಬದಲಾವಣೆಯಿಲ್ಲ, ಎಂದಿನಂತೆ ಸಂಚರಿಸಲಿವೆ.

LEAVE A REPLY

Please enter your comment!
Please enter your name here